ವಾಲ್ಮೀಕಿ ರಾಮಾಯಣ ವಿಶ್ವಕ್ಕೆ ನೀಡಿದ ಬಹುದೊಡ್ಡ ಕೊಡುಗೆ’

ಕೊಟ್ಟೂರು, ಅ.31: ವಾಲ್ಮೀಕಿ ಅವರು ರಚಿಸಿದ ರಾಮಾಯಣ ಮಹಾಕಾವ್ಯ ಇಡೀ ವಿಶ್ವಕ್ಕೆ ಭಾರತ ನೀಡಿದ ಬಹುದೊಡ್ಡ ಸಾಹಿತ್ಯ ಕೊಡುಗೆಯಾಗಿದೆ. ವಾಲ್ಮೀಕಿ ರಾಮಾಯಣ ದೇಶ-ಭಾಷೆಗೆ ಸೀಮಿತಗೊಳ್ಳದೆ ಜಾಗತಿಕವಾಗಿ ಆರಾಧಿಸಲ್ಪಟ್ಟಿದೆ ಎಂದು ತಾಲೂಕುಪಂಚಾಯಿತಿ ಅಧ್ಯಕ್ಷ ಶಾನಬೋಗರ ಗುರುಮೂರ್ತಿ ಹೇಳಿದರು.
ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಮಾತನಾಡಿ ಮಾನವೀಯ ಗುಣಗಳನ್ನು ಮೈಗೂಡಿಸಿಕೊಳ್ಳುವುದು ಸೇರಿದಂತೆ ಉತ್ತಮ ಸಮಾಜ ನಿರ್ಮಾಣದ ಮಹತ್ವದ ಸಂಗತಿಗಳನ್ನು ರಾಮಾಯಣ ಮಹಾಕಾವ್ಯದಿಂದ ನಾವು ಕಲಿಯಬಹುದಾಗಿದೆ ಎಂದರು. ಮಾಜಿ ತಾಲೂಕು ಪಂಚಾಯಿತಿ ಅಧ್ಯಕ್ಷಹಾಲಿ ಸ್ಥಾಯಿಸಮೀತಿ ಅಧ್ಯಕ್ಷ ಬಿ.ವೆಂಕಟೇಶನಾಯ್ಕ ಸಭೆಯಲ್ಲಿ ಮಾತನಾಡಿದರು. ಸಮಾಜದ ಪ್ರಕಾಶ, ತಾಲೂಕು ಪಂಚಾಯಿತಿ ಅಧಿಕಾರಿ ವಿಜಯಕುಮಾರ, ಕೆಂಚಪ್ಪ, ನಾಗರಾಜ ಸೇರಿದಂತೆ ಇತರರು ಇದ್ದರು.