ವಾಲ್ಮೀಕಿ ಜಾತ್ರೆ; ಪ್ರಸನ್ನಾನಂದ ಪುರಿ ಶ್ರೀ ಸಭೆ

ಹೊನ್ನಾಳಿ.ಜ.೧೨; ಹರಿಹರ ತಾಲೂಕು ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಫೆ.8 ಹಾಗೂ 9ರಂದು ವಾಲ್ಮೀಕಿ ಜಾತ್ರೆ-3 ನಡೆಯಲಿದ್ದು, ಅದಕ್ಕಾಗಿ ಆಹ್ವಾನ ನೀಡಲು ರಾಜನಹಳ್ಳಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಜ.14ರಂದು ಪಟ್ಟಣಕ್ಕೆ ಆಗಮಿಸಲಿದ್ದಾರೆ ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ತಾಲೂಕು ಘಟಕದ ಅಧ್ಯಕ್ಷ ತಿಮ್ಮೇನಹಳ್ಳಿ ಟಿ.ಆರ್. ಚಂದಪ್ಪ ತಿಳಿಸಿದ್ದಾರೆ.ಪಟ್ಟಣದ ಸುಂಕದಕಟ್ಟೆ ರಸ್ತೆಯಲ್ಲಿನ ಶ್ರೀ ವಾಲ್ಮೀಕಿ ಸಮುದಾಯ ಭವನಕ್ಕೆ ಜ.14ರ ಗುರುವಾರ ಮಧ್ಯಾಹ್ನ 12ಕ್ಕೆ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆಗಮಿಸಲಿದ್ದು, ಆ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ತಾಲೂಕು ಘಟಕದ ಎಲ್ಲಾ ಪದಾಧಿಕಾರಿಗಳು, ಸಮಾಜದ ಎಲ್ಲಾ ಮುಖಂಡರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು-ಮುಖಂಡರು, ಮಹಿಳಾ ಸಂಘಟನೆಗಳ ಪದಾಧಿಕಾರಿಗಳು, ಎಸ್ಟಿ ನೌಕರರ ಸಂಘದ ಪದಾಧಿಕಾರಿಗಳು, ವಾಲ್ಮೀಕಿ ಸಮಾಜದ ಎಲ್ಲಾ ಬಂಧುಗಳು-ಅಭಿಮಾನಿಗಳು ಉಪಸ್ಥಿತರಿರಬೇಕು ಎಂದು ಸೋಮವಾರ ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಅವರು ವಿನಂತಿಸಿದ್ದಾರೆ.ಜ.14ರ ಗುರುವಾರ ಮಧ್ಯಾಹ್ನ 12ಕ್ಕೆ ಹೊನ್ನಾಳಿಗೆ ಆಗಮಿಸುವ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಜಾತ್ರೆ-3ರ ಪೋಸ್ಟರ್‌ಗಳನ್ನು ಬಿಡುಗಡೆ ಮಾಡಲಿದ್ದಾರೆ. ಸಮಾಜದ ಸಂಘಟನೆಯ ಬಗ್ಗೆ ವಿವರಿಸುತ್ತಾರೆ. ಆದ್ದರಿಂದ, ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದ್ದಾರೆ.