ವಾಲ್ಮೀಕಿ ತತ್ವ ಪಾಲಿಸಲು ಕರೆ

ಕೆ.ಆರ್.ಪುರ,ಅ.೩೧- ಶ್ರೀ ಮಹರ್ಷಿ ವಾಲ್ಮೀಕಿ ತತ್ವಸಿದ್ದಾಂತಗಳು ಇಂದಿಗೂ ಪ್ರಸ್ತುತ ಎಂದು ಸಮಾಜದ ಈಶ್ವರಾನಂದ ಸ್ವಾಮಿಜಿ ತಿಳಿಸಿದರು.
ಕೆ.ಆರ್.ಪುರದ ತಾಲ್ಲೂಕು ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು.
ಶ್ರೀ ವಾಲ್ಮೀಕಿ ಮಹರ್ಷಿ ಅವರ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುವಂತೆ ಮನವಿ ಮಾಡಿದರು.
ಮಹರ್ಷಿ ವಾಲ್ಮೀಕಿ ಅವರು ಒಂದು ಸಮುದಾಯಕ್ಕೆ ಮಾತ್ರ ಸಿಮೀತವಲ್ಲ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಹಾಗೂ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಅವರ ಕೊಡುಗೆ ಅಪಾರ ಎಂದು ನುಡಿದರು.
ವಾಲ್ಮೀಕಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಹಾಗೂ ಸಂಘದಿಂದ ಶೈಕ್ಷಣಿಕ ಹಾಗೂ ಸಮಾಜದ ಅಭಿವೃದ್ಧಿಗೆ ಏಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು.
ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವ ಮೂಲಕ ಸಮಾದಾಯವನ್ನು ಶೈಕ್ಷಣಿಕವಾಗಿ ಮುಂಚೂಣಿಗೆ ತರುವಂತೆ ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಸಮಾಜದ ಸಂಜಯ್ ಕುಮಾರನಂದ ಸ್ವಾಮಿಜಿ,ಬ್ರಹ್ಮನಂದಗರುಜಿ, ಮುಖಂಡರಾದ ಶ್ರೀ ಮಹರ್ಷಿ ವಾಲ್ಮೀಕಿನಾಯಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ.ಎಂ.ಗಣೇಶ್,ಮುಖಂಡರಾದ ಬಾಕ್ಸರ್ ನಾಗರಾಜ್, ಎಂ.ಮಂಜುನಾಥ್,ನಾಗರಾಜ್,ದುಶ್ಯಂತ್ ರಾಜ್,ಕೆ.ಎಮ್.ಗಣೇಶ್, ಕಟ್ಟುಗೊಲ್ಲಹಳ್ಳಿ ಶಿವಕುಮಾರ್ ಇದ್ದರು.