ವಾಲ್ಮೀಕಿ ನಾಯಕರ ವಿದ್ಯಾಭಿವೃದ್ಧಿಸಂಘದ ಕಛೇರಿಯ ಮಹರ್ಷಿಗೆ ನಮನ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಅ.28: ನಗರದ ಮೋಕಾ ರಸ್ತೆಯಲ್ಲಿರುವ ಬಳ್ಳಾರಿ ಜಿಲ್ಲಾ ವಾಲ್ಮೀಕಿ ನಾಯಕರ ವಿದ್ಯಾಭಿವೃದ್ಧಿ ಸಂಘದ ಕಛೇರಿಯಲ್ಲಿ ಇಂದು ರಾಮಾಯಣ ಕತೃ, ಆದಿಕವಿ, ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ವಾಲ್ಮೀಕಿ ಅವರ ಭಾವಚಿತ್ರಕ್ಕೆ ಸಂಘದ ಜಿಲ್ಲಾ ಅಧ್ಯಕ್ಷ ಬಿ.ರಾಂ ಪ್ರಸಾದ್ ಪುಷ್ಪಮಾಲೆ ಅರ್ಪಿಸಿ ಪೂಜೆ ಸಲ್ಲಿಸಿ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಪರಶುರಾಮುಡು, ಉಪಾಧ್ಯಕ್ಷರಾದ ಬಿ.ಜಯರಾಂ, ಹಿರಿಯರಾದ ರುದ್ರಪ್ಪ ಸೇರಿದಂತೆ ಸಂಘದ, ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.