
ಸಂಜೆವಾಣಿ ವಾರ್ತೆ
ಹೊಸಪೇಟೆ ಮಾ8: ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಗುಜ್ಜಲ ಶಿವರಾಮ(75) ಇಂದು ಬೆಳಗಿನ ಜಾವ ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಗುಜ್ಜಲ ಶಿವರಾಮ ಪತ್ನಿ, ಮೂವರು ಗಂಡು ಹಾಗೂ ಒಬ್ಬರು ಹೆಣ್ಣು ಮಗಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಪ್ರಸ್ತೂತ ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷರಾಗಿದ್ದ ಶ್ರೀಯುತರು ಹೊಸಪೇಟೆ ನಗರಸಭೆಯ ಸದಸ್ಯರಾಗಿ, ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಹಿರಿಯ ಸಮಾಜ ಚಿಂತಕ ಹಾಗೂ ನಾಯಕ ಸಂಘದ ಅಧ್ಯಕ್ಷರಾಗಿದ್ದ ಗುಜ್ಜಲ ಶಿವರಾಮಪ್ಪ ನಿಧನಕ್ಕೆ ಸಚಿವ ಆನಂದಸಿಂಗ್ ಸೇರಿದಂತೆ ವಿವಿಧ ಸಮಾಜದ ಗಣ್ಯರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಕಂಬನಿ ಮಿಡಿದಿದ್ದು ಕುಟುಂಬಕ್ಕೆ ಅಗಲಿಕೆಯ ದುಖ ಭರಿಸುವ ಶಕ್ತಿಯನ್ನು ನೀಡಲೆಂದು ಪ್ರಾರ್ಥಿಸಿದ್ದಾರೆ. ಇಂದು ಸಂಜೆ ಆಕಾಶವಾಣಿಯ ಬಳಿ ಇರುವ ವಾಲ್ಮೀಕಿ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಕುಟುಂಬದ ಮೂಲಕಗಳು ತಿಳಿಸಿದ್ದಾರೆ.