ವಾಹನ ಉರುಳಿ 9 ಮಂದಿ ಯೋಧರು ಹುತಾತ್ಮ

ಲೇಹ್/ನವದೆಹಲಿ.ಆ.೨೦- ಸೇನಾ ವಾಹನ ಆಳವಾದ ಕಮರಿಗೆ ಬಿದ್ದ ಪರಿಣಾಮ ಇಬ್ಬರು ಜೆಸಿಒಗಳು ಸೇರಿದಂತೆ ೯ ಮಂದಿ ಸೇನಾ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಲಡಾಖ್‌ನಲ್ಲಿ ಸಂಭವಿಸಿದೆ.
ಘಟನೆಯಲ್ಲಿ ಓರ್ವ ಸೈನಿಕ ಗಾಯಗೊಂಡಿದ್ದು ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ಧಾರೆ.
ಕ್ಯಾರಿ ಪಟ್ಟಣದಿಂದ ಕನಿಷ್ಠ ಏಳು ಕಿಲೋಮೀಟರ್ ದೂರದಲ್ಲಿ ಈ ದರುಂತ ಸಂಭವಿಸಿದೆ. ಮೃತರಲ್ಲಿ ಇಬ್ಬರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು ಕೂಡ ಸೇರಿದ್ದಾರೆ. ಗಾಯಗೊಂಡ ಯೋಧನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಸೇನಾ ವಾಹನ ಲೆಹ್‌ನಿಂದ ನ್ಯೋಮಾಗೆ ಬೆಂಗಾವಲಾಗಿ ಚಲಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತ ನಡೆದ ಸಂದರ್ಭದಲ್ಲಿ ೧೦ ಸಿಬ್ಬಂದಿಗಳಿದ್ದರು. ಈ ಪೈಕಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ” ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.
ಸಿಂಗ್ ಸಂತಾಪ
ಲಡಾಖ್‌ನ ಲೇಹ್ ಬಳಿ ನಡೆದ ಅಪಘಾತದಲ್ಲಿ ಭಾರತೀಯ ಸೇನೆಯ ೯ ಮಂದಿ ಯೋಧರು ಸಾವಿಗೀಡಾದ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ತಿವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಯೋಧರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. “ಲಡಾಖ್‌ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಿಂದ ವೀರ ಸೈನಿಕರನ್ನು ಕಳೆದುಕೊಂಡಿದ್ದೇವೆ,ಇದು ದುಃಖದ ಸಂಗತಿ.ಗಾಯಗೊಂಡ ಯೋಧ ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೂ ಕೂಡ ದುರಂತ ಘಟನೆಗೆ ಸಂತಾಪ ಸೂಚಿಸಿದ್ದಾರೆ. “ಲಡಾಖ್‌ನಲ್ಲಿ ಸಂಭವಿಸಿದ ಅಪಘಾತದಿಂದ ನಮ್ಮ ಅನೇಕ ಸೈನಿಕರು ಹುತಾತ್ಮರಾದ ಸುದ್ದಿ ತುಂಬಾ ದುಃಖಕರವಾಗಿದೆ. ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ” ಎಂದಿದ್ದಾರೆ.

ಸೇನಾ ವಾಹನ ಕಮರಿಗೆ ಉರುಳಿ ೯ ಯೋಧರು ಸಾವು

  • ಇಬ್ಬರೂ ಇಂಜಿನಿಯರ್ ಕೂಡ ದುರ್ಘಟನೆಯಲ್ಲಿ ಸಾವು
  • ಓರ್ವ ಯೋಧನಿಗೆ ಗಾಯ, ಆಸ್ಪತ್ರೆಗೆ ದಾಖಲು
  • ದುರಂತದ ಬಗ್ಗೆ ಸಚಿವರಾದ ರಾಜ್‌ನಾಥ್ ಸಿಂಗ್, ಅಮಿತ್ ಶಾ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ
  • ಗಾಯಗೊಂಡ ಯೋಧನ ಶೀಘ್ರ ಚೇತರಿಕೆಗೆ ಪಾರ್ಥನೆ