ವಿಂಡೀಸ್ ವಿರುದ್ಧ ಟೆಸ್ಟ್‌, ಏಕದಿನ ಸರಣಿಗೆ ಭಾರತ ತಂಡ ಪ್ರಕಟ

ಮುಂಬೈ, ಜೂ.23- ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಎರಡು ಟೆಸ್ಟ್ ಹಾಗೂ ಏಕದಿನ ಕ್ರಿಕೆಟ್ ಸರಣಿಗೆ ಇಂದು‌ ಭಾರತ ತಂಡವನ್ನು ಪ್ರಕಟಿಸಲಾಗಿದೆ.
ವಿಶ್ವ ಟೆಸ್ಟ್‌ ಕ್ರಿಕೆಟ್‌ನಲ್ಲಿ ಕಳಪೆ ಪ್ರದರ್ಶನ ನೀಡಿದ್ದ ವೇಗದ ಬೌಲರ್ ಉಮೇಶ್ ಯಾದವ್ ಹಾಗೂ ಬ್ಯಾಟರ್ ಚೇತೇಶ್ವರ ಪೂಜಾರ ಅವರನ್ನು ತಂಡದಿಂದ ಕೈಬಿಡಲಾಗಿದೆ.
ಅಂಜಿಕ್ಯಾ ರಹಾನೆ ಟೆಸ್ಟ್ ಕ್ರಿಕೆಟ್ ತಂಡದ ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.
ಈ ಬಾರಿಯ ಐಪಿಎಲ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ರುತುರಾಜ್ ಗಾಯಕ್ವಾಡ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಕೆ.ಎಸ್‌ ಭರತ್‌ ಹಾಗೂ ಇಶಾನ್‌ ಕಿಶನ್‌ ಸ್ಥಾನ ಪಡೆದುಕೊಂಡಿದ್ದಾರೆ. ಜೊತೆಗೆ ರವೀಂದ್ರ ಜಡೇಜಾ, ಆರ್‌. ಅಶ್ವಿನ್‌ ಹಾಗೂ ಅಕ್ಷರ್‌ ಪಟೇಲ್‌ ಅವರು ಸ್ಪಿನ್‌ ಆಲ್‌ರೌಂಡರ್‌ಗಳಾಗಿ ಸ್ಥಾನ ಉಳಿಸಿಕೊಂಡಿದ್ದಾರೆ.
ಟೆಸ್ಟ್‌ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆ.ಎಸ್ ಭರತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್‌ ಪಟೇಲ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನದ್ಕತ್, ನವದೀಪ್ ಸೈನಿ.
ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್‌, ಕುಲ್ದೀಪ್‌ ಯಾದವ್, ಜಯದೇವ್ ಉನದ್ಕತ್, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.