ವಿಕಲಚೇತನರಿಂದ ಮತದಾನ ಜಾಗೃತಿ

ಬ್ಯಾಡಗಿ,ಏ7: ಪ್ರಜ್ಞಾವಂತ ಮತದಾರರು ಪ್ರಜಾಪ್ರಭುತ್ವದ ಮೂಲಭೂತ ಹಕ್ಕಾದ ಮತದಾನದಲ್ಲಿ ಕಡ್ಡಾಯವಾಗಿ ಪಾಲ್ಗೊಂಡು ದೇಶದ ಅಭಿವೃದ್ದಿಗೆ ಕೈಜೋಡಿಸಬೇಕಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ.ಮಲ್ಲಿಕಾರ್ಜುನ ಹೇಳಿದರು.
ಪಟ್ಟಣದ ತಾಲೂಕಾ ಪಂಚಾಯತ ಆವರಣದಲ್ಲಿ ತಾಲೂಕಾ ಸ್ವೀಪ್ ಸಮೀತಿ ವತಿಯಿಂದ ಆಯೋಜಿಸಿದ ವಿಶೇಷ ವಿಕಲಚೇತನರ ತಾಲೂಕ ಮಟ್ಟದ ತ್ರೈಸಿಕಲ್ (ಬೈಸಿಕಲ್) ಜಾಥಾದ ಮತದಾನದ ಜಾಗೃತಿ ಕಾರ್ಯಕ್ರಮದ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ಮತದಾನದಿಂದ ದೂರ ಉಳಿದವರಿಗೆ ಮತದಾನದ ಮಹತ್ವ ಕುರಿತು, ತಿಳಿ ಹೇಳುವ ಮೂಲಕ ಮತದಾನ ಮಾಡುವಂತೆ ಪ್ರೇರೆಪಿಸಬೇಕು ಎಂದರು
ತಹಶೀಲ್ದಾರ ಎಸ್.ಎ.ಪ್ರಸಾದ್ ಅವರು ವಿಕಲಚೇತನರ ಪ್ರತಿನಿಧಿಗಳಿಗೆ ಮತದಾನದ ಪ್ರತಿಜ್ಞಾ ವಿಧಿಯನ್ನು ಭೋದಿಸಿ ಮಾತನಾಡುತ್ತ, ತಾಲೂಕಾ ವ್ಯಾಪ್ತಿಯಲ್ಲಿ ಮತದಾನ ಶೇಕಡಾ ಪ್ರಮಾಣ ಹೆಚ್ಚಿಸುವಲ್ಲಿ ಕಾಳಜಿ ವಹಿಸಬೇಕಿದ್ದು,ಎಲ್ಲರೂ ಮತದಾನ ಮಾಡುವುದರ ಬಗ್ಗೆ ಖಾತ್ರಿ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ನರೇಗಾ ಯೋಜನೆಯ ಸಹಾಯಕ ನಿರ್ದೇಶಕ ಶಂಕರ ಕಿಚಡಿ, ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎನ್.ತಿಮ್ಮಾರೆಡ್ಡಿ, ತಾಪಂ ವ್ಯವಸ್ಥಾಪಕ ಪ್ರಕಾಶ ಹಿರೇಮಠ, ಎಂಆರ್’ಡಬ್ಲ್ಯೂ ನಾಗರಾಜ ಅಗಸನಹಳ್ಳಿ, ವಿಕಲಚೇತನರ ಸಂಘದ ಅಧ್ಯಕ್ಷ ಪಾಂಡುರಂಗ ಸುತಾರ, ತಾಲೂಕಾ ಐಎಸಿ ಸಂಯೋಜಕ ಶಾನವಾಜ್ ಚಿಣಗಿ, ವಿಆರ್’ಡಬ್ಲ್ಯೂ ಅರವಿಂದ, ಸಿ.ಎಸ್.ಮಳಿಮಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.