
ಕಲಬುರಗಿ:ನ. 18 : ವಿಕಲಚೇತನರು ಸಾಧನೆ ಮೆರಯಬೇಕು. ಯಾರು ಯಾವುದರಲ್ಲಿ ಕಡಿಮೆ ಇಲ್ಲ. ವಿಕಲಚೇತನರಿಗೆ ಅನುಕಂಪ ಬೇಡ, ಅವಕಾಶ ನೀಡಬೇಕು. ಸರಕಾರದ ವಿವಿಧ ಯೋಜನೆಗಳನ್ನು ಪಡೆದು ಉನ್ನತ ಸ್ಥಾನಕ್ಕೆ ಏರಬೇಕೆಂದು ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಹೇಳಿದರು.
ಶನಿವಾರದಂದು ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಕಲಬುರಗಿ ಹಾಗೂ ವಿಕಲಚೇತÀನರ ಕ್ಷೇತ್ರದಲ್ಲಿ ಶ್ರಮಿಸುತ್ತಿರುವ ಎಲ್ಲಾ ಸಂಘ/ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ -2023ರ ಪ್ರಯುಕ್ತ ವಿಕಲಚೇತನರಿಗಾಗಿ ಕ್ರೀಡಾ ಹಾಗೂ ಸಾಂಸ್ಕøತಿಕ ಸ್ಪರ್ಧೇಯನ್ನು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಸಸಿಗೆ ನೀರೆರೆಯುವ ಮೂಲಕ ವಿಕಲಚೇತನರಿಗಾಗಿ ಕ್ರೀಡೆಗೆ ಚಾಲನೆ ನೀಡಿದರು.
ಮತದಾನದ ವಿಶೇಷ ಹಕ್ಕು ಬಗ್ಗೆ ವಿವರಿಸಿದರು. ಕಡ್ಡಾಯವಾಗಿ ಮತ ಚಲಾಯಿಸಬೇಕು. ಇದರ ಬಗ್ಗೆ ರಾಜ್ಯದಲ್ಲಿ ಒಂದು ಅಭಿಯಾನ ನಡೆದಿದೆ. ಈ ಬಗ್ಗೆ ತಿಳಿದುಕೊಂಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೊಂದಾಯಿಸಿಕೊಳ್ಳಬೇಕು. ಇದು ಸಂವಿಧಾನ ನೀಡಿದ ಹಕ್ಕು. ಕ್ರೀಡೆಗಳಲ್ಲಿ ಸೋಲು, ಗೆಲವು ಮುಖ್ಯವಲ್ಲ, ಭಾಗವಹಿಸುವ ಮೂಲಕ ತಮ್ಮಲ್ಲಿನ ಶಕ್ತಿ ತೊರಿಸಬೇಕು. ಜಿಲ್ಲಾಧಿಕಾರಿ ಮಾತನಾಡಿದರು.
ಶ್ರಾವಣದೋಷವುಳ್ಳ ಮಕ್ಕಳಿಗೆ ಜಿಲ್ಲಾಧಿಕಾರಿ ಹಸಿರು ನಿಶಾನೆ ತೋರಿಸಿ ಕ್ರೀಡೆಗಳಲ್ಲಿ ಹೆಚ್ಚಿನ ಸಂಖ್ಯೆ ವಿದ್ಯಾರ್ಥಿಗಳು ಭಾಗವಹಿಸಬೇಕೆಂದರು.
ಅಪರÀ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪ ನಿರ್ದೇಶಕರು ನವೀನ ಕುಮಾರ ಯು,ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಜಿ ಗಾಯತ್ರಿ,ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಣೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾದಿಕ ಹುಸೇನ್ ಖಾನ ಸೇರಿದಂತೆ ಅಂಗವಿಕಲ ಅಧಿಕಾರಿಗಳು ವಿದ್ಯಾರ್ಥಿಗಳು ಉಪಸ್ಥಿತರಿದರು