ವಿಕಲಚೇತನರಿಗೆ ಕೋವಿಡ್ ಲಸಿಕೆ

ಪುತ್ತೂರು, ಮೇ ೨೯- ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಕಲಚೇತನರಿಗೆ ಮೊದಲ ಹಂತದ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶುಕ್ರವಾರ ಪುತ್ತೂರಿನ ಪುರಭವನದಲ್ಲಿ ಚಾಲನೆ ನೀಡಲಾಯಿತು.
ಗ್ರಾಮೀಣ ವಿಕಲಚೇತನರ ಪುನರ್ವಸತಿ ಕಾರ್ಯಕರ್ತರು, ತಾಲೂಕು ಆರೋಗ್ಯ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಪುತ್ತೂರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ೭೩೨ ವಿಕಲ ಚೇತನರಿಗೆ ಶುಕ್ರವಾರ ಮತ್ತು ಶನಿವಾರ ಪುರಭವನದಲ್ಲಿ ಲಸಿಕೆ ನೀಡಲಾಗುತ್ತಿದೆ.
ಈ ಸಂದರ್ಭ ಪುತ್ತೂರು ನಗರಸಭಾ ಅಧ್ಯಕ್ಷ ಕೆ. ಜೀವಂಧರ್ ಜೈನ್, ಉಪಾಧ್ಯಕ್ಷೆ ವಿದ್ಯಾ ಆರ್. ಗೌರಿ, ತಾಲೂಕು ಆರೋಗ್ಯಾಧಿಕಾರಿ ಡಾ. ಆಶೋಕ್ ಕುಮಾರ್ ರೈ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಶ್ರೀಲತಾ, ಅಂಗನವಾಡಿ ಹಿರಿಯ ಮೇಲ್ವಿಚಾರಕಿಯಾದ ವಿಕಲ ಚೇತನನರ ಹಾಗೂ ಹಿರಿಯ ನಾಗರಿಕರ ತಾಲೂಕು ನೋಡಲ್ ಅಧಿಕಾರಿ ಭಾರತಿ ಜೆ., ವೈದ್ಯಾಧಿಕಾರಿಗಳಾದ ಡಾ. ದೀಪಕ್ ರೈ, ಡಾ. ಸುಹೈಲಾ ಮತ್ತಿತರರು ಉಪಸ್ಥಿತರಿದ್ದರು.