ವಿಕಲಚೇತನರಿಗೆ ಕೋವಿಡ್ ಲಸಿಕೆ; ಪರಿಶೀಲನೆ

ಹೊನ್ನಾಳಿ.ಜೂ.೨;  ಅವಳಿ ತಾಲ್ಲೂಕಿನ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವಿಕಲಚೇತನರಿಗೆ ಕೋವಿಡ್ ಲಸಿಕೆ ಹಾಕಲಾಗುತ್ತಿದ್ದು ಇಂದು ಕ್ಯಾಸಿನಕೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಭೇಟಿನೀಡಿ ಲಸಿಕೆ ಬಗ್ಗೆ ಮಾಹಿತಿ ಪಡೆದು, ಚಿಕಿತ್ಸೆ ಪಡೆಯಲು ಆಗಮಿಸಿದ್ದವರ ಆರೋಗ್ಯ ವಿಚಾರಿಸಿದರು.ವಿಕಲಚೇತನರಿಗೆ ಮೊದಲ ಆದ್ಯತೆ ನೀಡಿ ಲಸಿಕೆ ಹಾಕಬೇಕು ಎಂದು ವೈದ್ಯರಿಗೆ ಸೂಚನೆ ನೀಡಿದರು.ಅವಳಿ ತಾಲೂಕಿನ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಲಸಿಕೆ ವ್ಯವಸ್ಥೆ ಮಾಡಲಾಗಿದೆ.ಜನರು ಸಾಮಾಜಿಕ ಅಂತರ ಪಾಲನೆ ಮಾಡಬೇಕು,ಮಾಸ್ಕ್ ಧರಿಸಬೇಕು ಎಂದರು.