ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ ನೀಡಲು ಸೂಚನೆ

ತುಮಕೂರು, ಜು. ೧೬- ಆರೋಗ್ಯ ಇಲಾಖೆಯಿಂದ ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ ನೀಡುವ ಅವಶ್ಯಕತೆಯಿದ್ದು, ಜಿಲ್ಲೆಯಲ್ಲಿ ನೋಂದಾಯಿಸಿರುವ ವಿಕಲಚೇತನರಿಗೆ ತಾಲ್ಲೂಕು ಸಹಾಯಕ ವೈದ್ಯಾಧಿಕಾರಿಗಳು ಗುರುತಿನ ಚೀಟಿಗಳನ್ನು ನೀಡಲು ಕೂಡಲೇ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸೂಚಿಸಿದರು.
ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈವರೆಗೆ ೩೮೬೮೦ ವಿಕಲಚೇತನರು ನೋಂದಾಯಿಸಿದ್ದು, ಈ ಪೈಕಿ ೨೬೮೬೦ ಕಾರ್ಡುಗಳು ಜನರೇಟ್ ಆಗಿರುತ್ತವೆ. ೧೧೮೨೦ ತಾಲ್ಲೂಕು ಸಹಾಯಕ ವೈದ್ಯಾಧಿಕಾರಿಗಳ ಲಾಗಿನ್‌ನಲ್ಲಿ ಬಾಕಿ ಇದ್ದು, ಶೀಘ್ರ ಕಾರ್ಡ್‌ಗಳನ್ನು ಜನರೇಟ್ ಮಾಡಿಸಿ ನೀಡಲು ಸೂಚಿಸಿದರು.
ಜಿಲ್ಲೆಯಲ್ಲಿ ಅಂದಾಜು ೨೮ ಲಕ್ಷ ಎಬಿಎಆರ್‌ಕೆ ಕಾರ್ಡುಗಳನ್ನು ನೀಡುವ ಗುರಿಯನ್ನು ಹೊಂದಲಾಗಿದೆ. ಜಿಲ್ಲಾಸ್ಪತ್ರೆ, ತಾಲ್ಲೂಕು ಆಸ್ಪತ್ರೆ, ತುಮಕೂರು ಒನ್, ಗ್ರಾಮ ಒನ್, ಸೇವಾಸಿಂಧು, ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಎಪಿಎಲ್/ಬಿಪಿಎಲ್ ರೇ?ನ್ ಕಾರ್ಡುಗಳನ್ನು ಕಡ್ಡಾಯಗೊಳಿಸಿ ಎಲ್ಲರಿಗೂ ಎಬಿಎಆರ್‌ಕೆ ಕಾರ್ಡುಗಳನ್ನು ವಿತರಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಕಂದಾಯ ಇಲಾಖೆಯ ಜಾಗಗಳಲ್ಲಿ ಇರುವ ಶಾಲೆಗಳನ್ನು ಶಿಕ್ಷಣ ಇಲಾಖೆಯ ಸುಪರ್ದಿಗೆ ನೀಡುವ ಕೆಲಸ ಚಾಲನೆಯಲ್ಲಿದ್ದು, ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ ೪೧೩ ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ ೩೫೮ ಪ್ರಕರಣಗಳಿರುತ್ತವೆ. ಈ ಸಂಬಂಧ ನಿಗಧಿತ ನಮೂನೆಯಲ್ಲಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ತಾಲ್ಲೂಕು ಕಚೇರಿ ಹಾಗೂ ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಿಗೆ ಶಿಕ್ಷಣ ಇಲಾಖೆಯ ಬಿಇಓ/ಬಿ.ಆರ್.ಪಿ ಹಾಗೂ ಸಿಆರ್‌ಪಿ ಮುಖಾಂತರ ಅರ್ಜಿ ಸಲ್ಲಿಸಲು ಸೂಚಿಸಲಾಯಿತು.
ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳಿಗೆ ನಿವೇಶನ ನೀಡಬೇಕಾಗಿದ್ದು, ಕನಿ? ೨೦x೩೦ ಅಳತೆಯ ನಿವೇಶನಗಳನ್ನು ಮಹಾನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಆಯುಕ್ತರು/ಪೌರಾಯುಕ್ತರು/ಮುಖ್ಯಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತಿಗಳ ಪಿಡಿಓ ಅಧಿಕಾರಿಗಳು ನಿವೇಶನಗಳನ್ನು ಒದಗಿಸಲು ಕ್ರಮ ಕೈಕೊಳ್ಳಬೇಕೆಂದು ಸೂಚಿಸಿದರು.
ಸಾರ್ವಜನಿಕ ಕುಂದುಕೊರತೆ, ಸಾಮಾಜಿಕ ಭದ್ರತಾ ಯೋಜನೆಗಳಡಿ ಬಾಕಿ ಇರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ನಿರ್ದೇಶಿಸಿದರು.
ಭೂಮಿ ಯೋಜನೆ ಪ್ರಗತಿ, ಪಹಣಿ ಕಲಂ ೩/೯ ಮಿಸ್ ಮ್ಯಾಚ್, ಪೈಕಿ ಪಹಣಿ ಒಟ್ಟುಗೂಡಿಸುವಿಕೆ, ೧೧ಇಗೆ ಸಂಬಂಧಿಸಿದ ಆರ್ಟಿಸಿ ತಿದ್ದುಪಡಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ ವಿದ್ಯಾಕುಮಾರಿ, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಉಪವಿಭಾಗಾಧಿಕಾರಿ ಅಜಯ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀಧರ್ , ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಎನ್ ಆಂಜನಪ್ಪ ಸೇರಿದಂತೆ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.