ವಿಕಲಚೇತನರ ಕುಂದು ಕೊರತೆ ಸಭೆ

ಧಾರವಾಡ, ಜು.19: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ವಿಕಲಚೇತನರ ಕುಂದುಕೊರತೆ ನಿವಾರಿಸುವ ಜಿಲ್ಲಾಮಟ್ಟದ ಸಮಿತಿ ಸಭೆ ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಜರುಗಿತು.

ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು, ವಿಕಲಚೇತನರಿಂದ ಲಿಖಿತ ಅಹವಾಲುಗಳನ್ನು ಸ್ವೀಕರಿಸಿ, ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ತಕ್ಷಣವೇ ಪರಿಹರಿಸುವಂತೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ ಇಟ್ನಾಳ, ಉಪವಿಭಾಗಾಧಿಕಾರಿ ಅಶೋಕ ತೇಲಿ, ಎಲ್ಲ ತಾಲೂಕಿನ ತಹಶೀಲ್ದಾರರು, ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಜಿಲ್ಲಾ ಆಸ್ಪತ್ರೆ ಹಾಗೂ ಡಿಮ್ಯಾನ್ಸ್ ಆಸ್ಪತ್ರೆಯ ವೈದ್ಯಾಧಿಕಾರಿಗಳು ಮತ್ತು ಅನೇಕ ವಿಕಲಚೇತನರು ಪಾಲ್ಗೊಂಡಿದ್ದರು.

      ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಡಿ.ಎನ್.ಮೂಲಿಮನಿ ಸ್ವಾಗತಿಸಿ, ಸಭೆ ನಿರ್ವಹಿಸಿದರು.