ವಿಕಲಚೇತನರ ಕ್ರೀಡಾ ಸಾಂಸ್ಕೃತಿಕ ಕಾರ್ಯಕ್ರಮ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ನ.25: ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸಂಘ ಸಂಸ್ಥೆಗಳು ಇವರುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ-2022 ರ ಪ್ರಯುಕ್ತ ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಯ ವಿಕಲಚೇತನರಿಗೆ ವಿಮ್ಸ್ (VIMS) ಕ್ರೀಡಾಂಗಣ ಬಳ್ಳಾರಿಯಲ್ಲಿ ವಿಶ್ವ ವಿಕಲಚೇತನರ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಡಲಾಯಿತು.
ವಿಶ್ವ ವಿಕಲಚೇತನರ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಬಳ್ಳಾರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ವಿಜಯ್ ಕುಮಾರ್ ಕೆ.ಹೆಚ್.ಇವರು ಉದ್ಘಾಟಿಸಿ ಮಾತನಾಡಿ, ವಿಕಲಚೇತನ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಪ್ರಯತ್ನಿಸಬೇಕು. ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯ ಸೋಲು ಗೆಲುವಿನ ಮೆಟ್ಟಿಲು ಎಂದು ಕ್ರೀಡಾಪಟುಗಳಿಗೆ ಶುಭಾ ಸಂದೇಶ ನೀಡಿದರು.
ಈ ಶುಭ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿಗಳಾದ, ರಾಜನಾಯಕ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಗೋವಿಂದಪ್ಪ ಹೆಚ್.ಎಂ.ಬಳ್ಳಾರಿ ಇವರು ಮುಖ್ಯ ಅತಿಥಿಗಳಿಗೆ ಸ್ವಾಗತವನ್ನು ಕೋರಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಚೆಂಗಾರೆಡ್ಡಿ ಬುದ್ದಿಮಾಂದ್ಯ ಮಕ್ಕಳ ಸಂಸ್ಥೆಯ ಮುಖ್ಯಸ್ಥರಾದ ಕೆ.ಹೆಚ್.ಗುರುಮೂರ್ತಿ, ಅನುಗ್ರಹ ಬುದ್ಧಿಮಾಂದ್ಯ ಮಕ್ಕಳ ಸಂಸ್ಥೆಯ ಮುಖ್ಯಸ್ಥರಾದ ಸಿಸ್ಟರ್ ಲಿನೆಟ್ ಫರ್ನಾಂಡಿಸ್, ಡಾ.ಭೀಮಾ ಬುದ್ದಿಮಾಂದ್ಯ ಮಕ್ಕಳ ಸಂಸ್ಥೆಯ ಮುಖ್ಯಸ್ಥರಾದ ಮಹೇಶ್ ಹೆಚ್.ಎಂ. ಸೈಲ್ ಸಂಸ್ಥೆಯ ಮುಖ್ಯಸ್ಥರಾದ ಪಣಿರಾಜ್, ನವಜೀವನ ಸಂಸ್ಥೆಯ ಎಸ್ಥರ್, ಅಂಗವಿಕಲರ ಒಕ್ಕೂಟದ ಸಂಘದಿಂದ ಸುಬ್ಬರಾವ್, ಪರಶುರಾಮ್, ಅಂಗವಿಕಲ ಪಾಲಕರ ಒಕ್ಕೂಟದ ಅಧ್ಯಕ್ಷರಾದ ಎನ್.ಕುಮಾರಪ್ಪ ಹಾಗೂ ಪದಾಧಿಕಾರಿಗಳು, ನವತಾರೆ ಅಂಗವಿಕಲ ಒಕ್ಕೂಟದ ಅಧ್ಯಕ್ಷರಾದ ಸಾದಿಕ್, ಹಾಗೂ ಬಾಕಿದ್ ಪದಾಧಿಕಾರಿಗಳು, ಸಾಧ್ಯ ಬುದ್ಧಿಮಾಂದ್ಯ ಮಕ್ಕಳ ಸಂಸ್ಥೆಯಿಂದ ಗೋವಿಂದಪ್ಪ, ಆಕಾಂಕ್ಷ ವಿಶೇಷ ಮಕ್ಕಳ ಶಾಲೆಯಿಂದ ಕೃಷ್ಣಕುಮಾರ್, ವಿಶ್ವಚೇತನ ಅಂಧ ಮಕ್ಕಳ ಸಂಸ್ಥೆಯ ಮುಖ್ಯಸ್ಥರಾದ ಗಂಗಾಧರ್, ಸರ್ಕಾರಿ ಕಿವುಡು ಮಕ್ಕಳ ಪಾಠಶಾಲೆ ಬಳ್ಳಾರಿ ಶಿಕ್ಷಕರಾದ ರವಿ.ಸಿ.ಕೆ. ಮತ್ತು ವೈಶಾಲಿ, ಹಾಗೂ ಸಿಬ್ಬಂದಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಿಬ್ಬಂದಿ ವರ್ಗ, ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಯ ಎಂ.ಆರ್.ಡಬ್ಲ್ಯೂ ಯು.ಆರ್.ಡಬ್ಲ್ಯೂ ವಿ.ಆರ್.ಡಬ್ಲ್ಯೂ ಕಾರ್ಯಕರ್ತರು ಹಾಗೂ ವಿವಿಧ ಅಂಗವಿಕಲತೆಯ 800 ಜನ ವಿಶೇಷಚೇತನರು ಕ್ರಿಕೆಟ್, ಗುಂಡು ಎಸೆತ, ರನ್ನಿಂಗ್ ರೇಸ್, ಕಬ್ಬಡ್ಡಿ ಬೈಕ್ ರೇಸ್, ಕೇನ್ ರೇಸ್, ಜಾವಲಿನ್ ಥ್ರೋ, ಮ್ಯೂಜಿಕಲ್ ಚೇರ್, ಸಾಂಸ್ಕೃತಿಕ ಕಾರ್ಯಕ್ರಮಗಳಾದ ಜಾನಪದ ಗೀತೆ, ಭಾವಗೀತೆ, ಫ್ಯಾನ್ಸಿ ಡ್ರೆಸ್, ಚಿತ್ರಕಲೆ, ಮುಂತಾದ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಕಲಚೇತನರು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.