
ವಿಜಯಪುರ:ಮಾ.31: ವಿಧಾನ ಸಭಾ ಸಾರ್ವತ್ರಿಕ ಚುನಾವಣೆಯ ಅಂಗವಾಗಿ ಗುರುವಾರ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಅವರು ಜಿಲ್ಲೆಯ ಹಿರಿಯ ನಾಗರಿಕ ಹಾಗೂ ವಿಕಲ ಚೇತನ ಮತದಾರರ ಕುರಿತ ಸಭೆ ನಡೆಸಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ಈ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟ ಮತದಾರರು ಹಾಗೂ ವಿಶೇಷ ಚೇತನ ಮತದಾರರಿಗೆ ಅಂಚೆ ಮತ ಪತ್ರ ವಿತರಿಸುವ ಕುರಿತು ಆಯೋಗದ ನಿರ್ದೇಶನದಂತೆ ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಸೂಚಿಸಿದ ಅವರು, ಜಿಲ್ಲೆಯಲ್ಲಿ ಇಆರ್‍ಒ ನೆಟ್ ತಂತ್ರಾಶಂದಂತೆ 80 ವರ್ಷ ಮೇಲ್ಪಟ್ಟ 38,727 ಮತದಾರರಿದ್ದು, 20,295 ವಿಕಲಚೇತನ ಮತದಾರರಿದ್ದಾರೆ. ರ್ಯಾಂಪ್, ವ್ಹೀಲ್ ಚೇರ್ ವ್ಯವಸ್ಥೆ ಕಲ್ಪಿಸಲಾಗುವುದರಿಂದ ಎಲ್ಲಾ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆಯ ಅಧಿಕಾರಿಗಳಾದ ರಾಜಶೇಖರ ದೈವಾಡಿ ಹಾಗೂ ಡಯಟ್ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು