ವಿಕಾಸ್ ಭಾರತ್ ಯಾತ್ರೆಗೆ ಸಂಸದ ಉಮೇಶ ಜಾದವ್ ಚಾಲನೆ

ಯಡ್ರಾಮಿ:ಡಿ.29:ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಗ್ರಾಮೀಣ ಪ್ರದೇಶದ ಜನರಿಗೂ ತಲುಪಿಸುವ ನಿಟ್ಟಿನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ ಅಭಿಯಾನ ಆಯೋಜಿಸಲಾಗಿದೆ ಎಂದು ಸಂಸದ ಉಮೇಶ ಜಾದವ ತಿಳಿಸಿದರು.

ಪಟ್ಟಣದಲ್ಲಿ ನಮ್ಮ ಸಂಕಲ್ಪ ವಿಕಾಸಿತ್ ಭಾರತ್ ಯಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಾ.ಕೇಂದ್ರ ಸರ್ಕಾರ ಸಾರ್ವಜನಿಕರ ಅಭಿವೃದ್ಧಿಗೆ ನೂರಾರು ಯೋಜನೆಗಳನ್ನು ರೂಪಿಸಿದೆ.

ಕೇಂದ್ರ ಸರಕಾರದ ಯೋಜನೆಗಳು ಸಮಾಜದ ಕಟ್ಟ ಕಡೆಯ ನಾಗರೀಕರಿಗೂ ತಲುಪಿಸುವುದೇ ಬಿಜೆಪಿ ಪಕ್ಷದ ನರೇಂದ್ರ ಮೋದಿ ಆಡಳಿತದ ಕೇಂದ್ರ ಸರಕಾರದ ಗುರಿಯಾಗಿದೆ ಎಂದರು.

ನಮ್ಮ ಸರ್ಕಾರದ ಮುದ್ರಾಯೋಜನೆ,ಜನಧನ್ ಯೋಜನೆ, ಪಿ.ಎಂ ವಿಶ್ವಕರ್ಮ ಯೋಜನೆ, ಉಜ್ವಲ ಯೋಜನೆ,ಕೃಷಿ ಸನ್ಮಾನ್ ಯೋಜನೆ, ಅನ್ನ ಭಾಗ್ಯ ಯೋಜನೆ, ಸೇರಿದಂತೆ ವಿವಿಧ ಯೋಜನೆಗಳು.

ಮಾಹಿತಿ ಎಲ್‍ಇಡಿ ಪರದೆಯ ವಾಹನ ಮೂಲಕ ಯಡ್ರಾಮಿ ಗ್ರಾಪಂ ಜನರಿಗೆ ಜಾಗೃತಿ ಮೂಡಿಸುವ ಸಲುವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ವಿವರಿಸಿದರು.

ಸರ್ಕಾರದ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳನ್ನು ಸಂಘಟಿಸುವುದು,ಈ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳಿಗೆ ಇದರ ಸೌಲಭ್ಯಗಳು ಸಿಗುವಂತೆ ಮಾಡುವ ಈ ಕಾರ್ಯಕ್ರಮವು ಯಶಸ್ವಿಗೊಳಿಸಬೇಕಾಗಿದೆ.

ಅಧಿಕಾರಿಗಳು ಈ ಯೋಜನೆಗಳನ್ನು ಸಾರ್ವಜನಿಕರಿಗೆ ಸಮರ್ಪಕವಾಗಿ ತಲುಪಿಸುವ ಮೂಲಕ ಅರಿವು ಮೋಡಿಸುವಂತಾಗ ಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಂಸದರಿಂದ ಪ್ರತಿಜ್ಞಾವಿಧಿ ಭೋದಿಸಲಾಯಿತು.ಕೇಂದ್ರ ಸರ್ಕಾರದಿಂದ ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳ ಮಾಹಿತಿಯ ಕರಪತ್ರ ವಿತರಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಭೀಮರಾಯ ಗುಜಗುಂಡ ತಾಲೂಕು ಬಿಜೆಪಿ ಅಧ್ಯಕ್ಷರು, ಕೇನರಾ ಬ್ಯಾಂಕ್ ವ್ಯವಸ್ಥಾಪಕರು ಯಡ್ರಾಮಿ,ಕೃಷಿ ತಾಲೂಕು ಅಧಿಕಾರಿ ಶಾಂತಗೌಡ,ಧರ್ಮಣ್ಣ ರಾಠೋಡ ಬಿಜೆಪಿ ಮುಖಂಡರು, ಈರಣ್ಣ ಸುಂಕದ, ಮಲ್ಲಿಕಾರ್ಜುನ ಹೂಗಾರ ಇತರರು ಬಿಜೆಪಿ ಮುಖಂಡರು ಇತರರು ಭಾಗವಹಿಸಿದ್ದರು.