
ಜೆವಾಣಿ ಪ್ರತಿನಿಧಿಯಿಂದಹೊಸಪೇಟೆ ಆ15: ರಾಜ್ಯದ ಸರ್ವರ ಅಭಿವೃದ್ಧಿಗೆ ಬದ್ಧವಾದ ಸರ್ಕಾರ ನುಡಿದಂತೆ ನಡೆದಿದೆ. ನೂತನ ಜಿಲ್ಲೆ ವಿಜಯನಗರದ ಅಭಿವೃದ್ಧಿಗೂ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ ಅಹಮದ್ ಖಾನ್ ಹೇಳಿದರು.ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ 77 ನೇ ಸ್ವಾತಂತ್ರೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರುಸ್ವಾತಂತ್ರ ಹೋರಾಟಗಾರರ ತ್ಯಾಗ, ಬಲಿದಾನ ದಿಂದ ಇಂದು ನಮಗೆ ಸ್ವಾತಂತ್ರ ಬಂದಿದ್ದು, ಸ್ವಾತಂತ್ರ ಹೋರಾಟದಲ್ಲಿ ಭಾಗವಹಿಸಿ ನೋವು, ಹಿಂಸೆ, ಅವಮಾನಗಳನ್ನು ಅನುಭವಿಸಿದ ಅನೇಕರಿಗೆ ನಮಿಸುವುದು ನಮ್ಮ ಕರ್ತವ್ಯಈ ಶುಭ ಸಂದರ್ಭದಲ್ಲಿ ರಾಷ್ಟ್ರಕ್ಕೆ ಸ್ವಾತಂತ್ರವನ್ನು ತಂದು ಕೊಟ್ಟ ರಾಷ್ಟ್ರಪಿತ ಮಹಾತ್ಮಗಾಂಧೀಜಿ, ಸರ್ದಾರ್ ವಲ್ಲಭಭಾಯಿ ಪಟೇಲ್, ನೆಹರು, ಸುಭಾಷ್ ಚಂದ್ರಬೋಸ್, ದಾದಾಬಾಯಿ ನವರೋಜಿ, ಮೌಲಾನ ಅಬುಲ್ ಕಲಾಂ ಆಜಾದ್, ಸ್ವಾತಂತ್ರಕ್ಕಾಗಿ ಪ್ರಾಣತ್ಯಾಗ ಮಾಡಿದ ಭಗತ್ ಸಿಂಗ್, ಚಂದ್ರಶೇಖರ ಅಜಾದ್, ರಾಜ್ ಗುರು, ಸುಖ್ ದೇವ್ ಹಾಗೂ ಸಾವಿರಾರು ವೀರಯೋಧರನ್ನು ಸ್ಮರಿಸಿಕೊಳ್ಳುವುದು ನಮ್ಮೆಲ್ಲರ ಮೊದಲ ಕರ್ತವ್ಯ ಎಂದು ಸ್ವಾತಂತ್ರ್ಯ ನಂತರ ಭಾರತ ಸಾಕಷ್ಟು ಅಭಿವೃದ್ಧಿ ಕಂಡಿದ್ದು ಜಗತ್ತಿನ ಪ್ರಮುಖ ಸಾಲಿನಲ್ಲಿ ನಿಲ್ಲುವಂತಾಗಿದೆ.ಕರ್ನಾಟಕದಲ್ಲಿ ಸ್ವಾತಂತ್ರ ಹೋರಾಟಕ್ಕೆ ಸಂಬಂಧಿಸಿದಂತೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳು ತಮ್ಮದೇ ಆದ ಮಹತ್ತರ ಕಾಣಿಕೆ ನೀಡಿವೆ.ಸ್ವಾತಂತ್ರ್ಯ ಹೋರಾಟಕ್ಕೆ ಅವಿಭಾಜಿತ ಬಳ್ಳಾರಿ ಜಿಲ್ಲೆಯ ಸಾಕಷ್ಟು ಮಹನೀಯರು ಕೊಡುಗೆ ನೀಡಿದ್ದು ಆ ಪೈಕಿ ಕಮಲಾಪುರದ ಗುಂಡೂರಾವ್ ದೇಸಾಯಿಯವರ ಮನೆಗೆ ಹೋಗಿ ಸನ್ಮಾನಿಸುವುದಾಗಿ ಹೇಳಿದರು.ವಿಜಯನಗರ ಜಿಲ್ಲೆಯು ಇಂದು ಅಭಿವೃದ್ಧಿಯ ಹೆಜ್ಜೆಗಳನ್ನು ದಾಖಲಿಸುತ್ತಾ ಮುನ್ನಡೆದಿದೆ. ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ಕೆಡಿಪಿ ಸಭೆ ನಡೆಸಿ ಸಮಸ್ಯೆ ಅರಿಯಲು ಮುಂದಾಗಿದ್ದೇನೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನೀಲಿ ನಕ್ಷೆ ರೂಪಿಸಲಾಗುವುದು.ನಮ್ಮ ಸರ್ಕಾರದ ಮಹತ್ತರ ಯೋಜನೆಗಳಾದ ಗೃಹ ಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ ಇಂದು ಕೋಟ್ಯಂತರ ಜನರಿಗೆ ನೆಮ್ಮದಿಯ ಬದುಕು ಕಲ್ಪಿಸುತ್ತಿದೆ.ಸರ್ಕಾರದ ಐದು ಮಹತ್ತರ ಯೋಜನೆಗಳಲ್ಲಿ ನಾಲ್ಕು ಜಾರಿ ಮಾಡಿದ್ದು ಯುವ ನಿಧಿ ಸಹ ಮುಂದಿನ ದಿನಗಳಲ್ಲಿ ಜಾರಿ ಯಾಗಲಿದೆ. ಈ ಮೂಲಕ ನಮ್ಮ ಸರ್ಕಾರ ನುಡಿದಂತೆ ನಡೆದು ಕೊಂಡಿದೆ. ಇದು ನಮ್ಮ ಬದ್ಧತೆ ಹಾಗೂ ಜನಪರ ನಿಲುವು ಎಂದು ಸರ್ಕಾರದ ಕ್ರಮವನ್ನುಸರ್ಕಾರದ ಯೋಜನೆಗಳ ಮೂಲಕ ಪ್ರಗತಿಯತ್ತ ಸಾಗಲು ತಾವೆಲ್ಲರೂ ನಮ್ಮೊಂದಿಗೆ ಕೈ ಜೋಡಿಸಿ ಈ ಜಿಲ್ಲೆಯನ್ನು ಅಭಿವೃದ್ದಿಯತ್ತ ಕೊಂಡ್ಯೊಯಲು ಸಂಕಲ್ಪ ತೊಡೋಣಾ ಎಂದು ಹೇಳಿ, ವಿಜಯನಗರ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.ಇದೆ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಕುಶಾನಾಯ್ಕಗೆ ಪುರಸ್ಕಾರ ಹಾಗೂ ವೈಯಕ್ತಿಕ ಒಂದು ಲಕ್ಷ ನಗದು ಬಹುಮಾನ ನೀಡಿದರು.ಧ್ವಜವಂದನೆ, ಪಥ ಸಂಚಲನ, ಸಾಮೂಹಿಕ ಕವಾಯತ್, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ನಡೆಸಲಾಯಿತು.ಸಂಸದ ವೈ ದೇವೆಂದ್ರಪ್ಪ, ಶಾಸಕ ಗವಿಯಪ್ಪ, ಜಿಲ್ಲಾಧಿಕಾರಿ ದಿವಾಕರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶ್ರೀ ಹರಿಬಾಬು. ಜಿಲ್ಲಾ ಹಂತದ ಅಧಿಕಾರಿಗಳು ಹಾಜರಿದ್ದರು.