
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಆ.18: ಮುಖ್ಯಮಂತ್ರಿಗಳ ಗೃಹಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನಿನ್ನೆ ವಿಜಯನಗರ ಜಿಲ್ಲೆಯ ಶಾಸಕರು, ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಭೆ ನಡೆಸಿ, ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲಾಯಿತು
ಜಿಲ್ಲಾ ಉಸ್ತುವಾರಿ ಸಚಿವ ಬಿ.ಯಡ್.ಜಮೀರ್ ಅಹಮದ್ ಖಾನ್ ಹಾಗೂ ಜಿಲ್ಲೆಯ ಶಾಸಕರಾದ ಹೆಚ್.ಆರ್.ಗವಿಯಪ್ಪ,. ಡಾ.ಎನ್.ಟಿ.ಶ್ರೀನಿವಾಸ , ಮತ್ತು ಎಂ.ಪಿ.ಲತಾ ಮಲ್ಲಿಕಾರ್ಜುನ ರವರು ವಿಜಯನಗರ ಜಿಲ್ಲೆಯ ಅಭಿವೃದ್ಧಿಗೆ ವಿಶೇಷ ಅನುದಾನ ಅಥವಾ ಪ್ಯಾಕೇಜ್ ನೀಡಲು ಮನವಿಯನ್ನು ಮಾಡಿದರು.