ವಿಜಯನಗರ ಜಿಲ್ಲೆಗೆ ಕೂಡ್ಲಿಗಿ ಸೇರಿಸುವುದೇ ಸೂಕ್ತ -ಜರ್ಮಲಿ ಶಶಿಧರ

ಕೂಡ್ಲಿಗಿ. ನ.20:- ಕೂಡ್ಲಿಗಿ ತಾಲೂಕನ್ನು ನೂತನವಾಗಿ ರಚನೆಯಾಗುವ ವಿಜಯನಗರ ಜಿಲ್ಲೆಗೆ ಸೇರಿಸುವುದು ಸೂಕ್ತವಾಗಿದ್ದು ಸೇರ್ಪಡೆ ಮಾಡಲು ತಾಲೂಕಿನ ಜನಪ್ರತಿನಿಧಿಗಳು, ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಚ್ಛಾಶಕ್ತಿ ತೋರಿಸುವ ಮೂಲಕ ಈ ತಾಲೂಕಿನ ಜನತೆಗೆ ನ್ಯಾಯ ಒದಗಿಸಬೇಕೆಂದು ಕೂಡ್ಲಿಗಿ ತಾಲೂಕು ಬಿಜೆಪಿ ಮಾಜಿ ಅಧ್ಯಕ್ಷ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮಾಜಿ ಅಧ್ಯಕ್ಷ ಜರ್ಮಲಿ ಶಶಿಧರ ಒತ್ತಾಯಿಸಿದ್ದಾರೆ.
ಅವರು ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿದ್ದು ಕೂಡ್ಲಿಗಿ ತಾಲೂಕು ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು ಇಲ್ಲಿಯ ಜನತೆ ಬಳ್ಳಾರಿಗೆ ಹೋಗಲು ದಿನಗಟ್ಟಲೇ ಕಾಲಾವಕಾಶ ಬೇಕು ಆದರೆ ವಿಜಯನಗರ ಜಿಲ್ಲೆಗೆ ಸೇರ್ಪಡೆಯಾದಲ್ಲಿ ಗಂಟೆಯೊಳಗೆ ಹೊಸಪೇಟೆ ತಲುಪಲು ರಾಷ್ಟ್ರೀಯ ಹೆದ್ದಾರಿ ಅನುಕೂಲವಾಗಿದೆ, ಭೌಗೋಳಿಕವಾಗಿ ಹೊಸಪೇಟೆ ಹಾಗೂ ಕೂಡ್ಲಿಗಿ ಬಹಳ ಹತ್ತಿರವಾಗಿದ್ದು ನೂರು ಕಿಲೋ ಮೀಟರ್ ದೂರದ ಬಳ್ಳಾರಿಗೆ ಹೋಗುವುದು ಕಷ್ಟ, ರಾತ್ರಿಯಾದರೆ ಸಾರಿಗೆ ಸಂಪರ್ಕ ಸಹ ಇಲ್ಲ ಈಗಾಗಿ ಕೂಡ್ಲಿಗಿಯನ್ನು ವಿಜಯನಗರ ಜಿಲ್ಲೆಗೆ ಸೇರ್ಪಡೆ ಮಾಡಲೇಬೇಕು ಇಲ್ಲವಾದಲ್ಲಿ ತಾಲೂಕಿನ ಜನತೆ ನಿರಂತರವಾಗಿ ಹೋರಾಟದ ಹಾದಿ ತುಳಿಯಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.