ವಿಜಯನಗರ ಜಿಲ್ಲೆಗೆ ಪ್ರಥಮ ಸ್ಥಾನದಲ್ಲಿರುವ ಪಿ ಎಲ್ ಡಿ ಬ್ಯಾಂಕಿಗೆ ಪ್ರಶಸ್ತಿಯ ಪ್ರಧಾನ


 ಸಂಜೆವಾಣಿ ವಾರ್ತೆ
 ಹಗರಿಬೊಮ್ಮನಹಳ್ಳಿ. ಸೆ.27 ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ 2022-23 ರ  94ನೇ ರಾಜ್ಯಮಟ್ಟದ ಮಹಾಜನ ಸಭೆಯಲ್ಲಿ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ    ವಹಿವಾಟು ಮತ್ತು ವಸೂಲಾತಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿರುವುದರಿಂದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು 
 ಬ್ಯಾಂಕಿನ ಅಧ್ಯಕ್ಷರಾದ ಬಿ ಡಿ ಗಂಗಾಧರ್ ., ವ್ಯವಸ್ಥಾಪಕ ತಿಪ್ಪೇಸ್ವಾಮಿ ಅವರನ್ನು ಸನ್ಮಾನಿಸಿ ಮತ್ತು ಪ್ರಶಸ್ತಿ ನೀಡಿ ಗೌರವಿಸಲಾಗಿದೆ ಎಂದು ತಿಳಿಸಿದ್ದಾರೆ