ವಿಜಯನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಿಸಿಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದ ನಿಯೋಗ ಒತ್ತಾಯ

ಸಂಜೆವಾಣಿ ವಾರ್ತೆಹೊಸಪೇಟೆ ಆ18:ನೂತನ ವಿಜಯನಗರ ಜಿಲ್ಲೆಗೆ ಅಗತ್ಯ ಸಿಬ್ಬಂದಿ ಮತ್ತು ಅಧಿಕಾರಿಗಳ ನೇಮಕದ ಜತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ನೇತೃತ್ವದ ಜಿಲ್ಲೆಯ ಶಾಸಕರ ನಿಯೋಗ ಒತ್ತಾಯಿಸಿದೆ.ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಶಾಸಕರಾದ ಎಚ್.ಆರ್.ಗವಿಯಪ್ಪ, ಎಂ.ಪಿ.ಲತಾ ಮಲ್ಲಿಕಾರ್ಜುನ ಹಾಗೂ ಡಾ.ಎನ್.ಟಿ.ಶ್ರೀನಿವಾಸ್ ಜಿಲ್ಲೆಯ ಸಮಸ್ಯೆಗಳನ್ನು ಎಳೆಎಳೆಯಾಗಿ ವಿವರಿಸಿದರು.ಶ್ರೀ ಕೃಷ್ಣ ದೇವರಾಯ ಆಳ್ವಿಕೆ ಮಾಡಿದ್ದ ವಿಜಯನಗರ ಸಾಮ್ರಾಜ್ಯದ ಐತಿಹಾಸಿಕ, ಸಾಂಸ್ಕೃತಿಕ ಮತ್ತು ಕಲಾ ವೈಭವದಿಂದ ವಿಶ್ವದ ಗಮನ ಸೆಳೆಯುತ್ತಿದೆ. ಹೀಗಾಗಿ ಹೊಸಪೇಟೆಯನ್ನು ಜಿಲ್ಲಾ ಕೇಂದ್ರವನ್ನಾಗಿಸಿಕೊಂಡು ಹೊಸದಾಗಿ ವಿಜಯನಗರ ಜಿಲ್ಲೆ ರಚನೆಯಾಗಿದ್ದು ಎಲ್ಲರಿಗೂ ಗೊತ್ತಿರುವ ವಿಚಾರ. ಆದೆ, ಹೊಸ ಜಿಲ್ಲೆಯು ಸಾಕಷ್ಟು ಅಭಿವೃದ್ಧಿ ಹೊಂದಬೇಕಿದೆ. ಜಿಲ್ಲಾ ಕಚೇರಿಗಳು, ೧೯ ಇಲಾಖೆಗಳಿಗೆ ಕಚೇರಿ ಇಲ್ಲ. ೩೫ ಅಧಿಕಾರಿಗಳು ಬಳ್ಳಾರಿ, ದಾವಣಗೆರೆ, ಕೊಪ್ಪಳ ಜಿಲ್ಲೆ ಹೊಣೆಗಾರಿಕೆ ಜತೆಗೆ ವಿಜಯನಗರದಲ್ಲಿ ಪ್ರಭಾರಿಯಾಗಿ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಹೀಗಾಗಿ ಸ್ವಂತ ಕಚೇರಿ ಹಾಗೂ ಅಧಿಕಾರಿ ಸಿಬ್ಬಂದಿ ನೇಮಕ ಆಗಬೇಕಿದೆ ಎಂದು ತಿಳಿಸಿದರು.ಆಗಸ್ಟ್ ೯ ರಿಂದ ೧೫ ರವರೆಗೆ ವಿಜಯನಗರ ಜಿಲ್ಲೆಯಲ್ಲಿ ಶಾಸಕರ ಸಮ್ಮುಖದಲ್ಲಿ ತಾಲ್ಲೂಕುವಾರು ಕೆಡಿಪಿ ಸಭೆ ನಡೆಸಿದ್ದು, ಸರ್ಕಾರಿ ಶಾಲೆಗಳ ದುಸ್ಥಿತಿ, ಹಾಸ್ಟೆಲ್‌ಗಳಲ್ಲಿ ಸೌಲಭ್ಯಗಳ ಕೊರತೆ ಎದುರಿಸುತ್ತಿವೆ. ಶಿಕ್ಷಣ, ಆರೋಗ್ಯ, ಮೂಲ ಸೌಕರ್ಯ, ಕುಡಿಯುವ ನೀರು ಪೂರೈಕೆ ಹೀಗೆ ಸಾಕಷ್ಟು ಸಮಸ್ಯೆಗಳು ಕಂಡುಬಂದಿದೆ. ಪ್ರತಿ ತಾಲೂಕಿನಲ್ಲಿ ವಿಭಿನ್ನವಾದ ಜ್ವಲಂತ ಸಮಸೆಗಳು ತಾಂಡವಾಡುತ್ತಿವೆ. ಭವಿಷ್ಯದಲ್ಲಿ ಮಾದರಿ ಜಿಲ್ಲೆಯಾಗಲು ಆರೋಗ್ಯ, ಶಿಕ್ಷಣ, ಕೈಗಾರಿಕ, ಉದ್ಯೋಗ ಸೃಷ್ಟಿ, ಪುವಾಸೋದ್ಯಮದ ಅಭಿವೃದ್ಧಿಗೆ ಒತ್ತು ನೀಡಬೇಕಿದೆ ಎಂದು ವಿವರಿಸಿದರು.ತಮ್ಮ ನಿರ್ದೇಶನದಂತೆ ವಿಜಯನಗರ ಜಿಲ್ಲೆಯ ಉಸ್ತುವಾರಿ ವಹಿಸಿಕೊಂಡು, ಜಿಲ್ಲೆಯ ಸಮಗ್ರ ಚಿತ್ರಣ ಅರಿಯುವ ದೃಷ್ಟಿಯಿಂದ ತಾಲೂಕುವಾರು ಕೆಡಿಪಿ ನಡೆಸಿದ್ದೇನೆ. ಎಲ್ಲ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ್ದೇನೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲು ನಿರ್ಧಾರಿಸಲಾಗಿದೆ. ತಮ್ಮ ಅವಧಿಯಲ್ಲಿ ವಿಜಯನಗರ ಜಿಲ್ಲೆಗೆ ವಿಶೇಷ ಅನುದಾನದ ಅಥವಾ ಪ್ಯಾಕೇಜ್ ಘೋಷಿಸಬೇಕು.- ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಜಿಲ್ಲಾ ಉಸ್ತುವಾರಿ ಸಚಿವ.