ವಿಜಯನಗರ: ಶಿವಯೋಗಿ ಸಿದ್ದರಾಮ ಜಯಂತಿ ಆಚರಣೆ


ಹೊಸಪೇಟೆ ಜ.15: ವಿಜಯನಗರ ಜಿಲ್ಲಾಡಳಿತದ ವತಿಯಿಂದ ಭಾನುವಾರದಂದು ಶಿವಯೋಗಿ ಸಿದ್ದರಾಮ ಅವರ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾಂಕೇತಿಕವಾಗಿ ಆಚರಿಸಲಾಯಿತು.
ತಹಶೀಲ್ದಾರರಾದ ಕಾರ್ತಿಕ ಅವರು ಶಿವಯೋಗಿ ಸಿದ್ದರಾಮ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ಸಮಾಜದ ಮುಖಂಡರಿಗೆ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳು ಮತ್ತು ಸಮಾಜ ಮುಖಂಡರು ಇದ್ದರು.