ವಿಜಯಪುರದ ಕಗ್ಗೊಡು ಗೋಶಾಲೆಗೆ ಸಚಿವ ಪ್ರಭು ಚವ್ಹಾಣ್ ಭೇಟಿ

ವಿಜಯಪುರ, ನ.18-ಜಿಲ್ಲೆಯ ಕಗ್ಗೊಡು ಗೋರಕ್ಷಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅತ್ಯಂತ ಅದ್ಭುತವಾಗಿ ಗೋಶಾಲೆವನ್ನು ನಿರ್ವಹಣೆ ಮಾಡಿರುವುದನ್ನು ಕಂಡು ಸಂತೋಷ ಆಗಿದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಹೇಳಿದರು
ಗೋವು ಪೂಜೆ ನೆರವೇರಿಸಿ ಮಾತನಾಡಿದ ಸಚಿವರು ಸಿದ್ದೇಶ್ವರ ಸಂಸ್ಥೆ ವತಿಯಿಂದ ನೋಡಿಕೊಳ್ಳಲಾಗುತ್ತಿರುವ ಗೋಶಾಲೆ ಅಂದಾಜು 70 ಎಕರೆ ಪ್ರದೇಶದಲ್ಲಿ ವ್ಯಾಪಿಸಿದೆ. ಕಸಾಯಿಖಾನೆಗೆ ಸಾಗಿಸುತ್ತಿದ್ದ ಗೋವುಗಳ ರಕ್ಷಣೆ ಮಾಡಿ ಇಲ್ಲಿ ಆರೈಕೆ ಮಾಡಲಾಗುತ್ತಿದೆ ಎಂದು ಹೇಳಿದರು.
ಸುಮಾರು 700 ಗೋವುಗಳನ್ನು ಇಲ್ಲಿ ಆರೈಕೆ ಮಾಡಲಾಗುತ್ತಿದೆ. ಗೋವುಗಳ ಆರೈಕೆಗಾಗಿ ಇಲ್ಲಿಯೇ ಪಶುಚಿಕಿತ್ಸಾಲಯ ಹಾಗೂ ಪಶುಗಳ ಸೇವೆಗಾಗಿ ಆಂಬುಲೆನ್ಸ್ ಇರುವುದು ಗೋವುಗಳ ಬಗ್ಗೆ ಸಂಸ್ಥೆಗಿರುವ ಕಾಳಜಿಯನ್ನು ಎತ್ತಿತೋರಿಸುತ್ತದೆ ಎಂದು ಸಚಿವರು ಹೇಳಿದರು.
ಕಾರ್ಯಕ್ರಮದಲ್ಲಿ ಸಿದ್ದೇಶ್ವರ ಸಂಸ್ಥೆಯ ನಿರ್ದೇಶಕರಾದ ರಾಮನಗೌಡ ಪಾಟೀಲ್, ಕಾರ್ಯದರ್ಶಿ ದೇಸಾಯಿ ಇಲಾಖೆಯ ಆಯುಕ್ತ ಬಸವರಾಜೇಂದ್ರ ಹಾಗೂ ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.