ವಿಜಯಪುರ ಕೃಷಿ ಕಾಲೇಜ್ ಆವರಣದಲ್ಲಿ ಜ.21 ರಿಂದ23ರವರೆಗೆ ಕೃಷಿ ಮೇಳ

ವಿಜಯಪುರ,ಜ.18:ಜನವರಿ 21 ರಿಂದ 23ರವರೆಗೆ ವಿಜಯಪುರ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ‘ಸುಸ್ಥಿರ ಕೃಷಿಗಾಗಿ ಬರ ನಿರ್ವಹಣೆ’ ಕೃಷಿ ಮೇಳ-2023-24 ಹಮ್ಮಿಕೊಳ್ಳಲಾಗಿದೆ.

ವಿದ್ಯಾಧಿಕಾರಿ ಹಾಗೂ ಕೃಷಿ ಮೇಳ ಅಧ್ಯಕ್ಷ ಡಾ. ಭೀಮಪ್ಪ ಎ, ಪ್ರಾದೇಶಿಕ ಕೃಷಿ ಸಂಶೋಧನೆ ಕೇಂದ್ರದ ಸಹ ಸಂಶೋಧನ ನಿರ್ದೇಶಕ ಡಾ. ಅಶೋಕ ಸಜ್ಜನ ಹಾಗೂ ಕೃಷಿ ವಿಸ್ತರಣ ಶಿಕ್ಷಣ ಕೇಂದ್ರದ ಸಹ ವಿಸ್ತರಣ ನಿರ್ದೇಶಕ ಡಾ. ಆರ್.ಬಿ. ಬೆಳ್ಳಿ ಅವರು ಗುರುವಾರ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯ ಹಾಗೂ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದಲ್ಲಿ ನಡೆಯುವ ಕೃಷಿ ಮೇಳವನ್ನು ಜನವರಿ 21 ರಂದು ಬೆಳಿಗ್ಗೆ 11 ಗಂಟೆಗೆ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಅವರು ಉದ್ಘಾಟಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಸಚಿವ, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಕೃಷಿ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವÀ ಶಿವಾನಂದ ಪಾಟೀಲ ಕೃಷಿ ಪ್ರಕಟಣೆಗಳನ್ನು ಬಿಡುಗಡೆಗೊಳಿಸಲಿದ್ದಾರೆ ಎಂದು ತಿಳಿಸಿದರು.

ನಾಗಠಾಣ ಶಾಸಕÀ ವಿಠಲ ಕಟಕದೊಂಡ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ, ಸಂಸದÀ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಬಸನಗೌಡ ಪಾಟೀಲ ಯತ್ನಾಳ, ಹನಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ಸಿ.ಎಸ್.ನಾಡಗೌಡ ಅಪ್ಪಾಜಿ, ಭೀಮನಗೌಡ (ರಾಜುಗೌಡ) ಪಾಟೀಲ, ಆಶೋಕ ಮನಗೂಳಿ, ಹಿಟ್ಟಿನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷÀ ರವಿಕುಮಾರ ಕಡಿಮನಿ ಅವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ.ಎಲ್. ಪಾಟೀಲ ಅವರು ಗೌರವ ಉಪಸ್ಥಿತರಿರಲಿದ್ದಾರೆ.

ಸಮಾರೋಪ ಸಮಾರಂಭ :

ಜ.23ರಂದು ಮಧ್ಯಾಹ್ನ 3 ಗಂಟೆಗೆ ಸಮಾರೋಪ ಸಮಾರಂಭ ಜರುಗಲಿದ್ದು, ನಾಗಠಾಣ ಶಾಸಕÀ ವಿಠಲ ಕಟದೊಂಡ ಅಧ್ಯಕ್ಷತೆ ವಹಿಸಲಿದ್ದಾರೆ. ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ.ಎಲ್.ಪಾಟೀಲ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಜನವರಿ 21 ರಂದು ಮಧ್ಯಾಹ್ನ 2 ಗಂಟೆಯಿಂದ ಹವಾಮಾನ ವೈಪರಿತ್ಯದ ಪರಿಣಾಮಗಳು ಮತ್ತು ನಿರ್ವಹಣೆ, ಬರ ನಿರ್ವಹಣೆಗಗಿ ಕೃಷಿ ತಂತ್ರಜ್ಞಾನಗಳು, ರೈತರಿಂದ ರೈತರಿಗೆ ಕಾರ್ಯಕ್ರಮ-ಪ್ರಶಸ್ತಿ ವಿಜೇತ ರೈತರಿಂದ ಅನುಭವ ಹಂಚಿಕೆ, ಕಾರ್ಯಕ್ರಮಗಳು ನಡೆಯಲಿವೆ. ಜನವರಿ 22 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಸಾವಯವ ಮತ್ತು ನೈಸರ್ಗಿಕ ಕೃಷಿ, ರೈತರಿಂದ ರೈತರಿಗೆ ಕಾರ್ಯಕ್ರಮ–ಪ್ರಶಸ್ತಿ ವಿಜೇತ ರೈತರಿಂದ ಅನುಭವ ಹಂಚಿಕೆ, ಕಾರ್ಯಕ್ರಮಗಳು ಹಾಗೂ ಜನವರಿ 23 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಸುಸ್ಥಿರ ಕೃಷಿಗಾಗಿ ಉಪ ಕಸುಬುಗಳು, ಪ್ರಶಸ್ತಿ ವಿಜೇತ ರೈತರಿಂದ ಅನುಭವ ಹಂಚಿಕೆ, ಕಾರ್ಯಕ್ರಮಗಳು ನಡೆಯಲಿವೆ ಎಂದು ಅವರು ವಿವರಿಸಿದರು.