ವಿಜಯಪುರ ಜಿಲ್ಲೆಯಲ್ಲಿ 9 ಜನ ಕೋವಿಡ್ ಸೋಂಕಿತರ ಸಾವುಃ ಜಿಲ್ಲಾಧಿಕಾರಿ

ವಿಜಯಪುರ, ಮೇ.15-ಜಿಲ್ಲೆಯಲ್ಲಿ ಒಂಬತ್ತು ಜನ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ ಸುನೀಲಕುಮಾರ ಅವರು ತಿಳಿಸಿದ್ದಾರೆ.
ಕೋವಿಡ್ ಸೋಂಕಿತ 60 ವರ್ಷದ ವೃದ್ದೆ ರೋಗಿ ಸಂಖ್ಯೆ 1735822 ಅವರು ಮೃತಪಟ್ಟಿದ್ದಾರೆ. ಅವರು, ಉಸಿರಾಟದ ತೊಂದರೆ, ಮದುಮೇಹ ಖಾಯಿಲೆ ನಿಂದ ಬಳಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅದರಂತೆ 78 ವರ್ಷದ ವೃದ್ಧೆ ರೋಗಿ ಸಂಖ್ಯೆ 1716070, ಜ್ವರ, ಸಕ್ಕರೆ ಖಾಯಿಲೆ ಉಸಿರಾಟದ ತೊಂದರೆಯಿಂದ ಬಳಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಅವರು ಮೃತಪಟ್ಟಿದ್ದಾರೆ.
ಇನ್ನೋರ್ವ 38 ವರ್ಷದ ಯುವಕ ರೋಗಿ ಸಂಖ್ಯೆ 1732639, ಕೆಮ್ಮು, ಉಸಿರಾಟದ ತೊಂದರೆಯಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಮೃತಪಟ್ಟಿದ್ದಾರೆ.
60ವರ್ಷದ ಮಹಿಳೆ ರೋಗಿ ಸಂಖ್ಯೆ 1820193 ಉಸಿರಾಟದ ತೊಂದರೆಯಿಂದ, ಸಕ್ಕರೆ ಖಾಯಿಲೆಯಿಂದ ಬಳಲಿ, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ದಾಖಲಾಗಿದ್ದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅದರಂತೆ 63 ವರ್ಷದ ವೃದ್ಧ ರೋಗಿ ಸಂಖ್ಯೆ 11834418 ಉಸಿರಾಟದ ತೊಂದರೆಯಿಂದ ಬಳಲಿ ಖಾಸಗಿ ಆಸ್ಪತ್ರೆ ಗೆ ದಾಖಲಾಗಿದ್ದರು. ಅವರೂ ಮೃತಪಟ್ಟಿದ್ದಾರೆ.
45 ವರ್ಷದ ಪುರುಷ ರೋಗಿ ಸಂಖ್ಯೆ 1548868 ಇವರು ಐ.ಎಲ್.ಐ, ಸಕ್ಕರೆ ಖಾಯಿಲೆಯಿಂದ ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
59 ವರ್ಷದ ವೃದ್ಧ ರೋಗಿ ಸಂಖ್ಯೆ 1794131 ಅವರು ಸಾರಿ, ಉಸಿರಾಟದ ತೊಂದರೆ, ಜ್ವರ, ರಕ್ತದೊತ್ತಡ, ದಿಂದ ಬಳಲಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
62 ವರ್ಷದ ವೃದ್ದೆ ರೋಗಿ ಸಂಖ್ಯೆ 1326048 ಇವರು ಜ್ವರ, ರಕ್ತದೊತ್ತಡ ಮತ್ತು ಉಸಿರಾಟದ ತೊಂದರೆಯಿಂದ ಬಳಲಿ, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅದರಂತೆ 72 ವರ್ಷದ ವೃದ್ಧ ರೋಗಿ ಸಂಖ್ಯೆ 1373046 ರಕ್ತದೊತ್ತಡ ದಿಂದ ಬಳಲಿ ಖಾಸಗಿ ಆಸ್ಪತ್ರೆ ಗೆ ದಾಖಲಾಗಿದ್ದರು ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ .
ಇವರೆಲ್ಲರ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.