ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಕನಾನ್ ನೇಮಕ

ವಿಜಯಪುರ, ಮಾ.15: ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕನಾನ್ ಅಬ್ಬುಲ್ ಹಮೀದ್ ಮುಶ್ರೀಫ್ ಅವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಕನಾನ್ ಅವರು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಅವರ ಹಿರಿಯ ಪುತ್ರರಾಗಿದ್ದಾರೆ.
ಪದವೀಧರರಾಗಿರುವ ಕನಾನ್, ತಂದೆಯ ಜೊತೆ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಬ್ದುಲ್ ಹಮೀದ್ ಮುಶ್ರೀಫ್ 2018 ಮತ್ತು 2023ರಲ್ಲಿ ವಿಜಯಪುರ ನಗರ ಮತಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪರಾಜಿತರಾಗಿದ್ದರು. ಈಗ ಅವರ ಪುತ್ರನಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ದೊರೆತಿದೆ.
ಹೊಸ ಜವಾಬ್ದಾರಿ ನನ್ನ ಹೆಗಲೇರಿದೆ. ಇದು ನನಗೆ ತುಂಬಾ ಸಂತಸವನ್ನುಂಟು ಮಾಡಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರ ವಿಶೇಷ ಕಾಳಜಿಯಿಂದ ನನಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ಒಲಿದು ಬಂದಿದೆ. ಸಚಿವರ ಹಾಗೂ ಪಕ್ಷದ ಎಲ್ಲ ಮುಖಂಡರ ಮಾರ್ಗದರ್ಶನದಲ್ಲಿ ನಗರದ ಸವಾರ್ಂಗೀಣ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ನೂತನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನಾನ್ ಮುಶ್ರೀಫ್ ಪ್ರತಿಕ್ರಿಯಿಸಿದ್ದಾರೆ.