ವಿಜಯಪುರ: ಬಸ್‍ಸಂಚಾರವಿಲ್ಲದೇ ಪ್ರಯಾಣಿಕರ ಪರದಾಟ

ವಿಜಯಪುರ ಏ 7: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯಲ್ಲಿ ಬಸ್ ಸಂಚಾರ ಸಂಪೂರ್ಣ ಸ್ಥಬ್ದಗೊಂಡಿದ್ದು ಬಸ್ ಸಂಚಾರವಿಲ್ಲದೇ ಪ್ರಯಾಣಿಕರು ಪರದಾಡುವಂತಾಗಿದೆ.
ಕೇಂದ್ರ ಬಸ್ ನಿಲ್ದಾಣದಲ್ಲಿ ಪೆÇಲೀಸ ರಿಂದ ಬಿಗಿ ಭದ್ರತೆ ಒದಗಿಸ ಲಾಗಿದೆ. ಬಸ್ ನಿಲ್ದಾಣದ ಹೊರಗಡೆ
ಪ್ರಯಾಣಿಕರು ಎಂದಿನಂತೆ ಆಗಮಿಸಿ ಖಾಸಗಿ ವಾಹನಗಳ ಮೊರೆ ಹೋಗಿದ್ದಾರೆ. ಆಟೋ ಟಂಟಂ, ಖಾಸಗಿ ಬಸ್ಸುಗಳ ಮೂಲಕ ಬೇರೆ ಸ್ಥಳಗಳಿಗೆ ತೆರಳುತ್ತಿದ್ದಾರೆ.
ಬಸ್ ನಿಲ್ದಾಣದಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೆÇಲೀಸ್ ಇಲಾಖೆ ವತಿಯಿಂದ
ಹೆಚ್ಚಿನ ಸಂಖ್ಯೆ ಯಲ್ಲಿ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.ಖಾಸಗಿ ಬಸ್ ಹಾಗೂ ಆಟೋ ಚಾಲಕರು ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿಮಾಡುತ್ತಿದ್ದಾರೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.