ವಿಜಯಪುರ ಬಾಗಲಕೋಟ ಅವಳಿ ಜಿಲ್ಲೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಪರಿಷತ ಚುನಾವಣೆ ಯಶಸ್ವಿಗೊಳಿಸಿಃ ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್

ವಿಜಯಪುರ, ನ.11-ವಿಜಯಪುರ ಹಾಗೂ ಬಾಗಲಕೋಟೆ ಅವಳಿ ಜಿಲ್ಲೆಗಳ ವಿಧಾನಪರಿಷತ್ ಚುನಾವಣೆಗೆ ನೇಮಿಸಿರುವ ಚುನಾವಣಾ ಅಧಿಕಾರಿಗಳು ಪರಸ್ಪರ ಸಮನ್ವಯತೆ ಸಾಧಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪಿ.ಸುನಿಲ್ ಕುಮಾರ್ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಛೇರಿಯ ವಿಡಿಯೋ ಸಂವಾದ ಸಭಾಂಗಣದಲ್ಲಿಂದು ವಿಧಾನಪರಿಷತ್ ಚುನಾವಣೆ ಹಿನ್ನೆಲೆ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ಚುನಾವಣಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ವಿಧಾನಪರಿಷತ್ ಚುನಾ ವಣೆಯನ್ನು ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಅಧಿಕಾರಿಗಳು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಹೇಳಿದರು.
ಅದರಂತೆ ನಿಗದಿತ ಸಮಯದೊಳಗೆ ಮತದಾರರ, ಚಾಲ್ತಿ ಮೆಂಬರ್ಸ, ಪರಿಷ್ಕøತ ಯಾದಿಯನ್ನು ಒದಗಿಸಬೇಕು ಅನರ್ಹ ಮತದಾರರನ್ನು ಪಟ್ಟಿಯಿಂದ ಹೊರಗಿಡುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈಗಾಗಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು ಎರಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಾಕಲಾಗಿರುವ ಬ್ಯಾನರ್, ಬಂಟಿಂಗ್ಸ್ ಗಳನ್ನು ತೆರವು ಗೊಳಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.
ಬಾಗಲಕೋಟೆ ಜಿಲ್ಲೆಯ ಕರಡಿ ಮತಗಟ್ಟೆ ಕೇಂದ್ರವನ್ನು ಹೊರತುಪಡಿಸಿದರೆ ಒಟ್ಟು 37 ಮತಗಟ್ಟೆ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ದುರಸ್ತಿ ಮತಗಟ್ಟೆಗಳ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡುವಂತೆ ಅವರು ಸೂಚಿಸಿದರು.
ಚುನಾವಣಾ ಕಾರ್ಯದಲ್ಲಿ ಬೇಜವಾಬ್ದಾರಿ ತೋರುವ, ನಿರ್ಲಕ್ಷತೆ ವಹಿಸುವ, ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಮೂರು ದಿನಗಳೊಳಗಾಗಿ ಮತದಾರರ ಪಟ್ಟಿಯನ್ನು ಹಾಗೂ ಎರಡು ದಿನಗಳೊಳಗಾಗಿ ಮತಗಟ್ಟೆ ಕೇಂದ್ರಗಳ ಸಮರ್ಪಕ ವರದಿ ಸಲ್ಲಿಸುವಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಒಂದು ವೇಳೆ ಅನಿವಾರ್ಯ ಕಾರಣಗಳಿಂದ ಮತಗಟ್ಟೆ ಕೇಂದ್ರಗಳ ಬದಲಾವಣೆಯಾದರೆ ಆ ಬಗ್ಗೆ ಕೂಡಲೇ ಅಧಿಕಾರಿಗಳು ವರದಿ ಸಲ್ಲಿಸುವಂತೆ ಸೂಚನೆ ನೀಡಿದರು. ಸಭೆಯಲ್ಲಿ ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.