ವಿಜಯಪುರ ಸೈಕ್ಲಿಂಗ್ ವೆಲೋಡ್ರೋಮ ಕಾಮಗಾರಿ ಪರಿಶೀಲನೆ

ವಿಜಯಪುರ:ಮಾ.15: ಜಿಲ್ಲಾಧಿಕಾರಿಗಳಾದ ಡಾ.ವಿಜಯ ಮಹಾಂತೇಶ ದಾನಮ್ಮನವರ ಅವರು ಮಂಗಳವಾರ ವಿಜಯಪುರ ನಗರದ ಭೂತನಾಳ ಗ್ರಾಮದ ಹತ್ತಿರ ನಿರ್ಮಾಣದ ಹಂತದಲ್ಲಿರುವ ಸೈಕ್ಲಿಂಗ್ ವೆಲೊಡ್ರೋಮ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪ್ರಗತಿ ಪರಿಶೀಲನೆ ಮಾಡಿದರು.

ಸೈಕ್ಲಿಂಗ್ ವೆಲೋಡ್ರೋಮ್ ನಿರ್ಮಾಣದಿಂದ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಸೈಕ್ಲಿಂಗ್ ಸ್ಪರ್ಧೆ ಏರ್ಪಡಿಸಲು ಹಾಗೂ ಸೈಕ್ಲಿಸ್ಟ್‍ಗಳಿಗೆ ದೈನಂದಿನ ತರಬೇತಿಗಾಗಿ ಅನುಕೂಲವಾಗಲಿದ್ದು, ಸೈಕ್ಲಿಂಗ್ ವೆಲೊಡ್ರೋಮ್ ಕಾಮಗಾರಿಯನ್ನು ಈ ಮಾಸಾಂತ್ಯಕ್ಕೆ ಪೂರ್ಣಗೊಳಿಸಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಗೆ ಹಸ್ತಾಂತರಿಸುವಂತೆ ಗುತ್ತಿಗೆದಾರರಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಈ ಸಂದsÀರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ವಿಜಯಕುಮಾರ್ ಮೆಕ್ಕಳಿಕಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಗೋಪಿನಾಥ ಮಲಜಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಎಸ್.ಜಿ ಲೋಣಿ,ವೆಲೋಡ್ರೋಮ್ ನಿರ್ಮಾಣದ ¸ಲಹೆಗಾರರಾದ ಪಿನಾಕಿ ಬೈಸಾಕಿ, ರಾಜ್ಯ ಸೈಕ್ಲಿಂಗ್ ಅಮೇಚೂರ್ ಸಂಸ್ಥೆಯ ಅಧ್ಯಕ್ಷರಾದ ವಿ ರಾಜು ಬಿರಾದಾರ, ಸೈಕ್ಲಿಂಗ್ ತರಬೇತಿದಾರರಾದ ಅಲ್ಕಾ ಪಡತಾರೆ ಸೇರಿದಂತೆ ವಿವಿಧ ತರಬೇತಿದಾರರು, ಗುತ್ತಿಗೆದಾರರು ಉಪಸ್ಥಿತರಿದ್ದರು.