ವಿಜಯಪುರ 6 ಜನ ಕೋವಿಡ್ ಸೋಂಕಿತರ ಸಾವು

ವಿಜಯಪುರ, ಮೇ.27-ಜಿಲ್ಲೆಯಲ್ಲಿ 6 ಜನ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲಕುಮಾರ ಅವರು ತಿಳಿಸಿದ್ದಾರೆ.
ಕೋವಿಡ್ ಸೋಂಕಿತ 70 ವರ್ಷದ ವೃದ್ಧ ರೋಗಿ ಸಂಖ್ಯೆ 1480127, ಅವರು ಮೃತಪಟ್ಟಿದ್ದಾರೆ. ಅವರು ಉಸಿರಾಟದ ತೊಂದರೆಯಿಂದ ಬಳಲಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅದರಂತೆ 48 ವರ್ಷದ ವೃದ್ಧ ರೋಗಿ ಸಂಖ್ಯೆ 1600765, ಮಧುಮೇಹ, ಉಸಿರಾಟದ ತೊಂದರೆಯಿಂದ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು ಅವರು ಮೃತಪಟ್ಟಿದ್ದಾರೆ.
ಇನ್ನೋರ್ವ 65 ವರ್ಷದ ವೃದ್ಧ ರೋಗಿ ಸಂಖ್ಯೆ 1862382, ಉಸಿರಾಟದ ತೊಂದರೆಯಿಂದ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಮೃತಪಟ್ಟಿದ್ದಾರೆ.
55 ವರ್ಷದ ವೃದ್ಧೆ ರೋಗಿ ಸಂಖ್ಯೆ 1862406, ಉಸಿರಾಟದ ತೊಂದರೆಯಿಂದ ಬಳಲಿ, ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಅದರಂತೆ 49 ವರ್ಷದ ವೃದ್ಧ ರೋಗಿ ಸಂಖ್ಯೆ 2029711, ನೆಗಡಿ, ಕೆಮ್ಮು, ರಕ್ತದೊತ್ತಡ, ಉಸಿರಾಟದ ತೊಂದರೆಯಿಂದ ಬಳಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರೂ ಮೃತಪಟ್ಟಿದ್ದಾರೆ.
59 ವರ್ಷದ ವೃದ್ಧ ರೋಗಿ ಸಂಖ್ಯೆ 1769672, ಉಸಿರಾಟದ ತೊಂದರೆಯಿಂದ ಬಳಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರೂ ಮೃತಪಟ್ಟಿದ್ದಾರೆ.
ಇವರೆಲ್ಲರ ಅಂತ್ಯಸಂಸ್ಕಾರವನ್ನು ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.