
ವಿಜಯಪುರ :ಎ.24: ಇದೇ ತಿಂಗಳ 29 ರಂದು ಪ್ರಧಾನಿ ನರೇಂದ್ರ ಮೋದಿಯವರು ವಿಜಯಪುರ ನಗರಕ್ಕೆ ಆಗಮಿಸಲಿದ್ದು ಅಂದು ಮಧ್ಯಾನ್ಹ 1 ಗಂಟೆಗೆ 8 ಕ್ಷೇತ್ರಗಳ ಪರವಾಗಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಆರ್.ಎಸ್.ಪಾಟೀಲ್ ಕುಚಬಾಳ ಮಾಹಿತಿ ನೀಡಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 29 ರಂದು ಮಧ್ಯಾಹ್ನ ನಗರದ ಸೈನಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿರು ಆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಕ್ಷದ ಕಾರ್ಯಕರ್ತರು ಹಾಗೂ ಮತದಾರರನ್ನು ಉದ್ದೇಶಿಸಿ ಭಾಸಬನ ಮಾಡಲಿದ್ದಾರೆ ಎಂದು ತಿಳಿಸಿದರು. ಅಂದು 8 ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಹಾಗೂ ಅಭ್ಯರ್ಥಿಗಳು ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.
ಅದರಂತೆ ನಾಳೆ ದಿನಾಂಕ 25 ರಂದು ಕೇಂದ್ರ ಗೃಹ ಸಚಿವ ಅಮಿತ್ ಷಾ ಹಾಗೂ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹಾಗೂ 26 ರಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಜಿಲ್ಲೆಗೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿಗಳ ಪ್ರವಾಗಿ ಪ್ರಚಾರ ಮಾಡಲಿದ್ದು, ಅಮಿತ್ ಶಾ ಕಾರ್ಯಕ್ರಮದಲ್ಲಿ 8 ಕ್ಷೇತ್ರಗಳ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ರು.25ರಂದು ಮಧ್ಯಾಹ್ನ 1 ಗಂಟೆಗೆ ದೇವರಹಿಪ್ಪರಗಿಯಲ್ಲಿ ಅಮಿತ್ ಶಾ ಕಾರ್ಯಕ್ರಮ ನಡೆಯಲಿದ್ದು, ಅಂದೆ ಬೆಳಗ್ಗೆ ಇಂಡಿಯಲ್ಲಿ ದೇವೇಂದ್ರ ಫಡ್ನವೀಸ್ ಕಾರ್ಯಕ್ರಮ ನಡೆಯಲಿದೆ, 26ರಂದು ದೇವೇಂದ್ರ ಫಡ್ನವೀಸ್ ಅವರು ಚಾಯ್ ಪೆ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 26 ರಂದು ಯೋಗಿ ಆದಿತ್ಯನಾಥ್ ಅವರು ಬೆಳಗ್ಗೆ ಬಸವನ ಬಾಗೇವಾಡಿ ಹಾಗೂ ಮಧ್ಯಾಹ್ನ ಇಂಡಿಯಲ್ಲಿ ಜರಾಗುವ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ರು.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಲಿಂಗಾಯತ ಭ್ರಷ್ಟಾಚಾರ ವಿಚಾರಕ್ಕೆ ಪ್ರತಿಕ್ರಿಯಿಸಿದ ಅಧ್ಯಕ್ಷ ಆರ್.ಎಸ್.ಪಾಟೀಲ್ ಕೂಚಬಾಳ 5 ವರ್ಷಗಳ ಸಿಎಂ ಆದವರು ಲಿಂಗಾಯತ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಕೇವಲ ರಾಜಕೀಯ ಉದ್ದೇಶಕ್ಕೆ ಒಂದು ಸಮುದಾಯವನ್ನೇ ಟೀಕೆ ಮಾಡುವುದು ತಪ್ಪು ಕೂಡಲೇ ಲಿಂಗಾಯತರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ, 70 ಕ್ಕೂ ಹೆಚ್ಚು ವಯಸ್ಸಾದವರನ್ನ ಮಾರ್ಗದರ್ಶಕ ಮಂಡಳಿಗೆ ಕಳುಹಿಸಲಾಗುತ್ತೆ ಎನ್ನುವ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಸಂಸದರು ನಾನು ಹೈಕಮಾಂಡ್ ವಿಚಾರಗಳ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ,ಅದನ್ನ ಹೈಕಮಾಂಡ್ ನೋಡಿಕೊಳ್ಳುತ್ತೇ ಎನ್ನುವ ಮೂಲಕ ಯತ್ನಾಳ್ ಹೇಳಿಕೆಗೆ ಕುಟುಕಿದರು. ನಾಗಠಾಣ ಕ್ಷೇತ್ರಕ್ಕೆ ನಾನೂ ಸೇರಿದಂತೆ ಹಲವರು ಆಕಾಂಕ್ಷಿಗಳಾಗಿದ್ದೆವು, ಆದರೆ ಹೈಕಮಾಂಡ್ ಓರ್ವ ಬಡ ಸಾಮಾನ್ಯ ಕಾರ್ಯಕರ್ತನನ್ನ ಚುನಾವಣೆಗೆ ಟಿಕೆಟ್ ನೀಡುವ ಮೂಲಕ ನಮ್ಮ ಪಕ್ಷ ಇತರರಿಗಿಂತ ವಿಭಿನ್ನ ಎನ್ನುವುದನ್ನ ತೋರಿಸಿಕೊಟ್ಟಿದ್ದಾರೆ. ನಾವೆಲ್ಲರೂ ಸೇರಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದರು.