ವಿಜಯಸಿಂಗ್‍ಗೆ ಕೋವಿಡ್ ಸೋಂಕು

ಬೀದರ್:ಎ.19: ವಿಧಾನ ಪರಿಷತ್ ಸದಸ್ಯ ವಿಜಯಸಿಂಗ್ ಅವರಿಗೆ ಕೋವಿಡ್ ಸೋಂಕು ತಗುಲಿದೆ.

ಅನಾರೋಗ್ಯದ ಕಾರಣ ತಪಾಸಣೆಗೆ ಒಳಗಾದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ. ಸದ್ಯ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆ ಪ್ರಯುಕ್ತ ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ಪಾಲ್ಗೊಂಡಿದ್ದೇನೆ. ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದೇನೆ. ಈ ವೇಳೆ ಸೋಂಕು ತಗುಲಿರಬಹುದು ಎಂದು ವಿಜಯಸಿಂಗ್ ತಿಳಿಸಿದ್ದಾರೆ.

ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.