ವಿಜಯೇಂದ್ರ ಸ್ಪರ್ಧೆ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಬಿಎಸ್ ವೈ ಸ್ಪಷ್ಟನೆ

ಬೆಂಗಳೂರು, ಜು.23-ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ. ತಮ್ಮ ಪುತ್ರ ವಿಜಯೇಂದ್ರ ಸ್ಪರ್ಧಿಸುವ ಕುರಿತು ವರಿಷ್ಠರೇ
ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಶಿಕಾರಿಪುರದಲ್ಲಿ ನಿನ್ನೆ ನೀಡಿದ ಹೇಳಿಕೆ ಬಗ್ಗೆ ಗೊಂದಲ ಉಂಟಾಗಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪನವರು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದವ ಅವರು, ಶಿಕಾರಿಪುರದ ಜನ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯ ಮಾಡಿದರು. ಚುನಾವಣೆಗ ನಿಲ್ಲುವುದಿಲ್ಲ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂಬುದಾಗಿ ಹೇಳಿದ್ದೆ. ಜನ ಒತ್ತಾಯ ಮಾಡಿದ್ದರಿಂದ ಈ ಹೇಳಿಕೆ ನೀಡಿದ್ದೆ. ಮೋದಿ, ಅಮಿತ್ ಶಾ ಹಾಗೂ ಜೆ.ಪಿ.ನಡ್ಡಾ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಯಾವುದೇ ಕ್ಷೇತ್ರದಲ್ಲಿ ವಿಜಯೇಂದ್ರ ಸ್ಪರ್ಧಿಸಿದರೆ ಗೆಲ್ಕುತ್ತಾರೆ. ಈ ವಿಚಾರದಲ್ಲಿ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧರಾಗಿರುವುದಾಗಿ ತಿಳಿಸಿದರು.
ಕುಟುಂಬ ರಾಜಕಾರಣ ಕುರಿತು ಪ್ರತಿಕ್ರಯಿಸಿದ ಅವರು, ನಾನು ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಬದಲಿಗೆ ನನ್ನ ಮಗ ಸ್ಪರ್ಧಿಸುತ್ತಾನೆ. ಈ ಕಾರಣಕ್ಕೆ ನಾನು ಚುನಾವಣೆಯಿಂದ ಹಿಂದೆ ಸರಿದಿದ್ದೇನೆ. ನನಗೆ ಪಕ್ಷದಲ್ಲಿ ಸಾಕಷ್ಟು ಅವಕಾಶ ಸಿಕ್ಕಿದೆ. ರಾಷ್ಟ್ರಮಟ್ಟದಲ್ಲಿ ಬೆಳೆಸಿದ್ದಾರೆ ಎಂದು ತಿಳಿಸಿದರು.
ಪಕ್ಷದಲ್ಲಿ ತಮ್ಮನ್ನು ಕಡೆಗಣಿಸಲಾಗಿದೆ ಎಂಬ ಆರೋಪಗಳನ್ನು ತಳ್ಳಿಹಾಕಿದ ಅವರು, ರಾಜ್ಯಾದ್ಯಂತ ಪ್ರವಾಸ ಮಾಡಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿ ಹೇಳಿದರು.