ವಿಜಯ್ ದಿವಸ್ ಶೌರ್‍ಯದ ಸಂಕೇತ


ನವದೆಹಲಿ,ಜು.೨೬- ಕಾರ್ಗಿಲ್ ವಿಜಯ್ ದಿವಸ್ ಸಶಸ್ತ್ರ ಪಡೆಗಳ ಅಸಾಧಾರಣ ಶೌರ್ಯದ ಸಂಕೇತ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಬಣ್ಣಿಸಿದ್ದಾರೆ.
ಭಾರತ ಮಾತೆಯನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಅರ್ಪಿಸಿದ ವೀರ ಸೈನಿಕರಿಗೆ ಜನರು ಯಾವಾಗಲೂ ಋಣಿಯಾಗಿರುತ್ತಾರೆ ಎಂದು ಹೇಳಿದ್ದಾರೆ.
ಕಾರ್ಗಿಲ್ ವಿಜಯ್ ದಿವಸದ ಹಿನ್ನೆಯಲ್ಲಿ ಟ್ವೀಟ್ ಮಾಡಿರುವ ರಾಷ್ಟ್ರಪತಿ ಮುರ್ಮು ಅವರು ಭಾರತದ ವಿಜಯದ ಸ್ಮರಣಾರ್ಥ ಈ ದಿನವನ್ನು ಕಾರ್ಗಿಲ್ ವಿಜಯ್ ದಿವಸ್ ಎಂದು ಆಚರಿಸಲಾಗುತ್ತದೆ. ಎಂದು ಹೇಳಿದ್ದಾರೆ.
“ಕಾರ್ಗಿಲ್ ವಿಜಯ್ ದಿವಸ್ ನಮ್ಮ ಸಶಸ್ತ್ರ ಪಡೆಗಳ ಅಸಾಧಾರಣ ಶೌರ್ಯ, ಶೌರ್ಯ ಮತ್ತು ಸಂಕಲ್ಪದ ಸಂಕೇತವಾಗಿದೆ. ಭಾರತಮಾತೆಯನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಅರ್ಪಿಸಿದ ಎಲ್ಲಾ ವೀರ ಸೈನಿಕರಿಗೆ ನಾನು ನಮಿಸುತ್ತೇನೆ. ಅವರಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ದೇಶವು ಯಾವಾಗಲೂ ಋಣಿಯಾಗಿರುತ್ತದೆ. ಜೈ ಹಿಂದ್” ಎಂದು ಟ್ವೀಟ್ ಮಾಡಿದ್ದಾರೆ.
ದೇಶ ಕಾರ್ಗಿಲ್ ಯುದ್ದದಲ್ಲಿ ೫೦೦ ಕ್ಕೂ ಹೆಚ್ಚು ಸೈನಿಕರನ್ನು ಕಳೆದುಕೊಂಡಿತ್ತು.
೧೯೯೯ರ ಜು.೨೬ ರಂದು, ಲಡಾಖ್‌ನ ಕಾರ್ಗಿಲ್‌ನ ಹಿಮಾವೃತ ಎತ್ತರದ ಮೇಲೆ ಸುಮಾರು ಮೂರು ತಿಂಗಳ ಸುದೀರ್ಘ ಯುದ್ಧದ ನಂತರ ವಿಜಯ ಘೋಷಿಸುವ ಮೂಲಕ ಭಾರತೀಯ ಸೇನೆ ಆಪರೇಷನ್ ವಿಜಯ್‌ನ ಯಶಸ್ವಿ ಕಾರ್ಯಾಚರಣೆಯನ್ನು ಘೋಷಿಸಿತ್ತು.