ವಿಜಯ ಸಂಕಲ್ಪ ಅಭಿಯಾನ

ಮುಧೋಳ,ಜ21 : ನಗರ ಮತ್ತು ಗ್ರಾಮಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಾಧನೆಗಳನ್ನು ಕರಪತ್ರ ಹಂಚುವ ಮೂಲಕ ವಿಜಯ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ನಾರಾಯಣ ಯಡಹಳ್ಳಿ ಹೇಳಿದರು.
ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ 212 ಬೂತ್‍ಮಟ್ಟದಲ್ಲಿ 20-25 ಧ್ವಜ ಅನಾವರಣ, ಪೋಸ್ಟರ್‍ಗಳನ್ನು ಹಚ್ಚುವ ಮೂಲಕ ಮುಧೋಳ ಶಾಸಕ ಹಾಗೂ ಸಚಿವ ಗೋವಿಂದ ಕಾರಜೋಳ ಅವರು ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಜನತೆಗೆ ತಿಳಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಹೇಳಿದರು.
ಬಿಜೆಪಿ ಗ್ರಾಮೀಣ ಅಧ್ಯಕ್ಷ ಹನಮಂತ ತುಳಸಿಗೇರಿ ಮಾತನಾಡಿ, ವಿಜಯ ಸಂಕಲ್ಪ ಅಭಿಯಾನದ ಕೊನೆಯ ದಿನವಾದ ಜ. 29 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕಿ ಬಾತ್ ಭಾಷಣವನ್ನು ಆಲಿಸಲು ಬೂತಮಟ್ಟದ ಮತದಾರರನ್ನು ಸೇರಿಸುವ ಕಾರ್ಯ ಸಿದ್ಧತೆ ನಡೆಸಲಾಗಿದೆ. ಈ ಅಭಿಯಾನ ಕಾರ್ಯಕ್ರಮ ಯಶಸ್ವಿಗೊಳಿಸಲು ಎಲ್ಲ ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕೆಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ನಗರ ಘಟಕದ ಅಧ್ಯಕ್ಷ ಡಾ.ರವಿ ನಂದಗಾಂವ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಮುಖರಾದ ರಾಕೇಶ ಗಣಿ ಉಪಸ್ಥಿತರಿದ್ದರು.