ವಿಜಯ ಸಂಕಲ್ಪ ಯಾತ್ರೆ ಯಶಸ್ವಿಗೊಳಿಸಿ: ಸಚಿವ ಪ್ರಭು ಚವ್ಹಾಣ

ಬೀದರ:ಫೆ.26:ವಿಜಯ ಸಂಕಲ್ಪ ಯಾತ್ರೆಯ ನಿಮಿತ್ತ ಮಾರ್ಚ್ 4ರಂದು ಔರಾದ(ಬಿ) ಪಟ್ಟಣದಲ್ಲಿ ಬೃಹತ್ ರೋಡ್ ಶೋ ನಡೆಯಲಿದ್ದು, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ಕಾರ್ಯಕರ್ತರಲ್ಲಿ ಮನವಿ ಮಾಡಿದರು.
ಔರಾದ(ಬಿ) ಪಟ್ಟಣದ ಬಿಜೆಪಿ ಕಾರ್ಯಾಲಯದ ಆವರಣದಲ್ಲಿ ಫೆ.25ರಂದು ನಡೆದ ಕಾರ್ಯಕಾರಿಣಿ ಸಭೆ ಹಾಗೂ ವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದರು.
ಈ ಯಾತ್ರೆಯಲ್ಲಿ ಪಕ್ಷದ ಪ್ರಮುಖ ನಾಯಕರು ಆಗಮಿಸುವರು. ಕಾರ್ಯಕ್ರಮದಲ್ಲಿ ಸುಮಾರು 40 ಸಾವಿರ ಜನ ಸೇರುವ ನಿರೀಕ್ಷೆಯಿದೆ. ಕ್ಷೇತ್ರದ ಎಲ್ಲ ಗ್ರಾಮಗಳಿಂದಲೂ ಜನ ಆಗಮಿಸಬೇಕು. ಈ ಕಾರ್ಯಕ್ರಮದಲ್ಲಿ ಎಲ್ಲೆಲ್ಲೂ ಜನಜಂಗುಳಿ ಕಾಣುವ ರೀತಿಯಲ್ಲಿ ಅಗತ್ಯ ತಯಾರಿಗಳನ್ನು ಮಾಡಿಕೊಳ್ಳಬೇಕು ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿ, ಅಮಿಶ್ ಶಾ ಹಾಗೂ ಜೆ.ಪಿ ನಡ್ಡಾ ಅವರ ಮುಂದಾಳತ್ವದಲ್ಲಿ ಬಿಜೆಪಿ ವಿಶ್ವದ ಅತಿ ದೊಡ್ಡ ಪಕ್ಷವಾಗಿ ಬೆಳೆದಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್ ಅವರ ನೇತೃತ್ವದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಒಳ್ಳೆಯ ಕೆಲಸಗಳು ನಡೆಯುತ್ತಿವೆ ಎಂದರು.
ಇಲ್ಲಿ ಕಾರ್ಯಕರ್ತರಿಗೆ ಪ್ರಮುಖ ಸ್ಥಾನಮಾನವಿದೆ. ಬಿಜೆಪಿ ಕಾರ್ಯಕರ್ತರನ್ನು ಅತ್ಯಂತ ಗೌರವ ನೀಡುವ ಪಕ್ಷವಾಗಿದೆ ಎಂದರು. ನಾನಗೆ ಕಾರ್ಯಕರ್ತರೇ ಶಕ್ತಿ. ಅವರು ನನಗೆ ಸಾಕಷ್ಟು ಪ್ರೀತಿ, ವಿಶ್ವಾಸ ಕೊಟ್ಟಿದ್ದಾರೆ. ಅವರ ಆಶಯದಂತೆ ಕೆಲಸ ಮಾಡುತ್ತಿದ್ದೇನೆ. ಕಾರ್ಯಕರ್ತರ ಪ್ರೀತಿ ವಿಶ್ವಾಸ ನನಗೆ ಶ್ರೀರಕ್ಷೆಯಾಗಿದೆ ಎಂದರು.
ಔರಾದ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಸೂಚಿಸುವ ಎಲ್ಲ ಕಾರ್ಯಚಟುವಟಿಕೆಗಳು ಅಚ್ಚುಕಟ್ಟಾಗಿ ನಡೆಯುತ್ತಿವೆ. ಬಿಜೆಪಿ ಸದಸ್ಯತ್ವ ಅಭಿಯಾನ ಯಶಸ್ವಿಯಾಗಿ ನಡೆದಿದೆ. ಪಕ್ಷದ ಎಲ್ಲ ಚಟುವಟಿಕೆಗಳು ಮುಂದೆಯೂ ಹೀಗೆಯೇ ನಡೆಯಬೇಕು. ಬೂತ್ ಮಟ್ಟದಲ್ಲಿ ಪಕ್ಷದ ಕಾರ್ಯಚಟುವಟಿಕೆಗಳು ಮತ್ತಷ್ಟು ಪರಿಣಾಮಕಾರಿಯಾಗಬೇಕು ಎಂದು ತಿಳಿಸಿದರು.
ಬಿಜೆಪಿ ವಿಭಾಗೀಯ ಸಹ ಸಂಘಟನಾ ಕಾರ್ಯದರ್ಶಿ ಸೂರ್ಯಕಾಂತ ದೋನಿ ಅವರು ಮಾತನಾಡಿ, ಔರಾದ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಸಂಘಟನೆ ಉತ್ತಮವಾಗಿದೆ. ಪಕ್ಷವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಾಡಬೇಕಾದ ಕೆಲಸಗಳು ಮತ್ತು ವಿಜಯ ಸಂಕಲ್ಪ ಯಾತ್ರೆ ಯಶಸ್ವಿಗೊಳಿಸಲು ಕಾರ್ಯಕರ್ತರ ಜವಾಬ್ದಾರಿಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು.
ಚುನಾವಣಾ ಪ್ರಭಾರಿಗಳಾದ ಶಿವರಾಜ ಗಂದಗೆ ಮಾತನಾಡಿ, ಸಚಿವ ಪ್ರಭು ಚವ್ಹಾಣ ಅವರ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳಾಗಿವೆ. ಕ್ಷೇತ್ರವು ಬಿಜೆಪಿ ಭದ್ರಕೋಟೆಯಾಗಲು ಸಚಿವ ಪ್ರಭು ಚವ್ಹಾಣ ಅವರ ಪಾತ್ರ ಬಹಳಷ್ಟಿದೆ. ಕಾರ್ಯಕರ್ತರು ಜನಪರ ಕಾಳಜಿ ಹೊಂದಿರುವ ಸಚಿವರನ್ನು ಮತ್ತೊಮ್ಮೆ ವಿಧಾನಸಭೆಗೆ ಕಳುಹಿಸಲು ಒಗ್ಗಟ್ಟಿನಿಂದ ಪ್ರಯತ್ನಿಸಬೇಕು ಎಂದರು.
ಔರಾದ ಮಂಡಲ ಅಧ್ಯಕ್ಷರಾದ ರಾಮಶೆಟ್ಟಿ ಪನ್ನಾಳೆ ಪ್ರಸ್ತಾವಿಕ ಮಾತನಾಡಿ, ಔರಾದ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಿಜಯಕುಮಾರ ಪಾಟೀಲ ಗಾದಗಿ, ಅರಹಂತ ಸಾವಳೆ, ಜಿಲ್ಲಾ ಕಾರ್ಯದರ್ಶಿ ಕಿರಣ ಪಾಟೀಲ, ವಿರಣ್ಣಾ ಕಾರಬಾರಿ, ವಸಂತ ಬಿರಾದಾರ, ದೊಂಡಿಬಾ ನರೋಟೆ, ಶರಣಪ್ಪ ಪಂಚಾಕ್ಷರಿ, ಪ್ರಕಾಶ ಘುಳೆ, ಎಂ.ಡಿ ಸಲಾವುದ್ದೀನ್, ಶಿವಾಜಿರಾವ ಪಾಟೀಲ ಮುಂಗನಾಳ, ಪ್ರತೀಕ್ ಚವ್ಹಾಣ, ಪ್ರಕಾಶ ಮೇತ್ರೆ, ಕೇರಬಾ ಪವಾರ, ರಮೇಶ ಉಪಾಸೆ, ಸತೀಷ ಪಾಟೀಲ, ಹಣಮಂತ ಸುರನಾರ, ಖಂಡೋಬಾ ಕಂಗಟೆ, ಶಕುಂತಲಾ ಮುತ್ತಂಗೆ, ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.