
ಬೀದರ:ಮಾ.2:ಬಸವಕಲ್ಯಾಣದಲ್ಲಿ ಮಾರ್ಚ್ 3 ರಂದು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಚಾಲನೆ ನೀಡಲಿರುವ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮವನ್ನು ಯಾವುದೇ ಲೋಪಗಳಿಗೆ ಆಸ್ಪದ ನೀಡದಂತೆ ಅಚ್ಚುಕಟ್ಟಾಗಿ ನಡೆಸಬೇಕೆಂದು ಪಶು ಸಂಗೋಪನೆ ಸಚಿವರಾದ ಪ್ರಭು.ಬಿ ಚವ್ಹಾಣ ಅವರು ತಿಳಿಸಿದರು.
ಮಾರ್ಚ್ 1ರಂದು ಬಸವಕಲ್ಯಾಣಕ್ಕೆ ತೆರಳಿ ಕಾರ್ಯಕ್ರಮದ ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿ ಮುಖಂಡರಿಗೆ ನಿರ್ದೇಶನ ನೀಡಿದರು.
ಕಾರ್ಯಕ್ರಮದ ಮುಖ್ಯ ವೇದಿಕೆ ಸ್ಥಳ, ಶಾಮಿಯಾನ, ಕುರ್ಚಿಗಳ ಜೋಡಣೆ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದ ಸಚಿವರು, ಎಲ್ಲವೂ ಯೋಜನಾಬದ್ಧವಾಗಿ ನಡೆಯಬೇಕು. ಕಾರ್ಯಕ್ರಮದ ದಿನ ಯಾವುದೇ ರೀತಿಯ ಕೊರತೆಗಳು ಇಲ್ಲದ ಹಾಗೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕೆಂದು ಸೂಚಿಸಿದರು.
ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕಾರ್ಯಕ್ರಮದ ಭದ್ರತೆಗೆ ಪೆÇಲೀಸ್ ಇಲಾಖೆಯಿಂದ ಮಾಡಿಕೊಂಡಿರುವ ತಯಾರಿಗಳ ಬಗ್ಗೆ ಮಾಹಿತಿ ಪಡೆದರು. ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವರು ಆಗಮಿಸುತ್ತಿರುವುದರಿಂದ ಭದ್ರತಾ ವಿಷಯದಲ್ಲಿ ಯಾವುದೇ ರೀತಿಯ ಲೋಪಗಳು ಆಗಬಾರದು. ಅಗತ್ಯ ಪೆÇಲೀಸ್ ಸಿಬ್ಬಂದಿಯನ್ನು ನಿಯೋಜಿಸುವುದು ಸೇರಿದಂತೆ ಕಾರ್ಯಕ್ರಮದ ಯಶಸ್ವಿಗೆ ಮಾಡಿಕೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
ಬಳಿಕ ಮಾತನಾಡಿದ ಸಚಿವರು, ಜಗತ್ತಿಗೆ ಸಮಾನತೆಯನ್ನು ಕಲಿಸಿದ ವಿಶ್ವಗುರು ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಆಗಮಿಸುತ್ತಿದ್ದು, ಪಕ್ಷದ ಮಹತ್ವದ ಕಾರ್ಯಕ್ರಮವಾದ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡುತ್ತಾರೆ. ಕಾರ್ಯಕ್ರಮಕ್ಕೆ ಎಲ್ಲ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.
ಕಾರ್ಯಕ್ರಮದ ಯಶಸ್ವಿಗೆ ಶಾಸಕರು, ಜನಪ್ರತಿನಿಧಿಗಳು, ಮುಖಂಡರನ್ನು ಒಳಗೊಂಡ ತಂಡವು ಉತ್ತಮವಾಗಿ ಕೆಲಸ ಮಾಡುತ್ತಿದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ ಕಟೀಲ್, ಮಾಜಿ ಮುಖ್ಯಮಂತ್ರಿಗಳು ಒಳಗೊಂಡಂತೆ ಕೇಂದ್ರ ಮತ್ತು ರಾಜ್ಯದ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದು, ಸುಮಾರು 50 ಸಾವಿರಕ್ಕಿಂತ ಹೆಚ್ಚು ಜನ ಸೇರಲಿದ್ದಾರೆ ಎಂದು ಹೇಳಿದರು.
ಮತ್ತೆ ಬಿಜೆಪಿ ಅಧಿಕಾರಕ್ಕೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರಗಳಿಂದ ರಾಜ್ಯದಲ್ಲಿ ಜನರ ಕಲ್ಯಾಣಕ್ಕಾಗಿ ಹಲವಾರು ಯೊಜನೆಗಳನ್ನು ಜಾರಿಗೊಳಿಸಲಾಗಿದೆ. ಪ್ರಸ್ತುತ ಸರ್ಕಾರ ಮಂಡಿಸಿರುವ ಬಜೆಟ್ ನಲ್ಲಿ ಸರ್ವರ ಏಳಿಗೆಗೆ ಮಹತ್ವ ನೀಡಲಾಗಿದೆ. ಸರ್ಕಾರದ ಸಾಧನೆಗಳನ್ನು ಮುಂದಿಟ್ಟುಕೊಂಡು ಜನರ ಬಳಿಗೆ ಹೋಗಲಿದ್ದೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 151 ಸ್ಥಾನಗಳಲ್ಲಿ ಜಯ ಸಾಧಿಸಲಿದ್ದು, ಬೀದರ ಜಿಲ್ಲೆಯ ಎಲ್ಲ 6 ಸ್ಥಾನಗಳಲ್ಲಿ ಬಿಜೆಪಿಯ ಅಭ್ಯರ್ಥಿಗಳು ಜಯ ಗಳಿಸಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶಿವಾನಂದ ಮಂಠಾಳಕರ್, ತಾಲ್ಲೂಕು ಅಧ್ಯಕ್ಷರಾದ ಅಶೋಕ ವಕಾರೆ, ಶಾಸಕರಾದ ಶರಣು ಸಲಗರ, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ ಮಲ್ಕಾಪೂರೆ, ಮಾಜಿ ಶಾಸಕರಾದ ಅಮರನಾಥ ಪಾಟೀಲ, ವಿಭಾಗ ಸಹ ಪ್ರಭಾರಿ ಈಶ್ವರಸಿಂಗ್ ಠಾಕೂರ್, ಸಿದ್ದೇಶ, ಮುಖಂಡರಾದ ಶಿವರಾಜ ಗಂದಗೆ, ಸೂರ್ಯಕಾಂತ ಚಿಲ್ಲಾಬಟ್ಟೆ, ಅರವಿಂದ ಮುತ್ತೆ, ಪ್ರದೀಪ ವತಾಡೆ ಹಾಗೂ ಇತರರು ಉಪಸ್ಥಿತರಿದ್ದರು.