ವಿಜೃಂಭಣೆಯ ಆಂಜನೇಯ ಕಾರ್ತಿಕೋತ್ಸವ

ಸಂಜೆವಾಣಿ ವಾರ್ತೆ

 ಹಿರಿಯೂರು : ಡಿ 13 –  ನಗರದ ಸಿದ್ದನಾಯಕ ವೃತ್ತದ ಬಳಿ ಇರುವ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಕಡೆ ಕಾರ್ತಿಕ ಪೂಜಾ ಕಾರ್ಯಕ್ರಮವು ವಿಜೃಂಭಣೆಯಿಂದ ನೆರವೇರಿತು. ಇದರ ಅಂಗವಾಗಿ ಶ್ರೀ ಆಂಜನೇಯ ಸ್ವಾಮಿಗೆ ಅರ್ಚನೆ ಅಭಿಷೇಕ ಲೋಕ ಕಲ್ಯಾಣಾರ್ಥವಾಗಿ ವಿಶೇಷ ಪೂಜೆ ಸಂಜೆ ಕಾರ್ತಿಕ ದೀಪೋತ್ಸವ ನೆರವೇರಿತು. ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ನಗರದ ಅನೇಕ ಭಕ್ತರು ಶ್ರೀ ಆಂಜನೇಯ ಸ್ವಾಮಿಯ ಕಡೆ ಕಾರ್ತಿಕ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು