ವಿಜ್ಞಾನ ಕುತೂಹಲಕಾರಿ ವಿಷಯ: ಮಠಪತಿ

ಭಾಲ್ಕಿ:ಮಾ.12:ವಿಜ್ಞಾನ ಅತ್ಯಂತ ಆಸಕ್ತಿದಾಯಕ, ಕುತೂಹಲಕಾರಿ ವಿಷಯವಾಗಿದ್ದು, ವಿದ್ಯಾರ್ಥಿಗಳು ಸೃಷ್ಟಿಯ ರಹಸ್ಯವನ್ನು ಭೇದಿಸಲು ವಿಜ್ಞಾನ ವಿಷಯವನ್ನು ಆಳವಾಗಿ ಅಭ್ಯಸಿಸಬೇಕು ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಅಧ್ಯಕ್ಷ ರಾಜಶೇಖರ ಮಠಪತಿ ಹೇಳಿದರು.

ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ 11ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ರಸಪ್ರಶ್ನೆಯಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಂಡು ವಿಜ್ಞಾನದ ಪ್ರತಿ ವಿಷಯನ್ನು ಪ್ರಯೋಗಾತ್ಮಕವಾಗಿ ತಿಳಿದುಕೊಳ್ಳಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹೆಚ್ಚಿಸುವ ಶಪಥ ಮಾಡಿಸಲಾಯಿತು.

ಮುಖ್ಯ ಶಿಕ್ಷಕ ಮಹೇಶ ಮಹಾರಾಜ್, ವಿಜ್ಞಾನ ವಿಭಾಗದ ಮುಖ್ಯಸ್ಥ ಓಂಕಾರ ಹಾರಕೂಡೆ, ಮಲ್ಲಿಕಾರ್ಜುನ ಚಳಕಾಪೂರೆ, ಸಂತೋಷ ಎರೋಳೆ, ಬಸವರಾಜ ಪ್ರಭಾ ಇದ್ದರು.