ವಿಟಿಯು ಪರೀಕ್ಷೆ: ವಿದ್ಯಾರ್ಥಿಗಳ ಜೊತೆ ಚೆಲ್ಲಾಟ ಬೇಡ: ಮುಂದೂಡಲು ಕೈ ಮನವಿ

ಬೆಂಗಳೂರು,ಏ.18- ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಳದ ನಡುವೆ ನಾಳೆಯಿಂದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾಲಯ- ವಿಟಿಯು ಪರೀಕ್ಷೆಗಳನ್ನು ನಡೆಸಲು ಸರ್ಕಾರ ಮುಂದಾಗಿರುವುದು ಮೂರ್ಖ ನಿರ್ಧಾರ ಎಂದು ಕಾಂಗ್ರೆಸ್ ಪಕ್ಷ ಟೀಕಿಸಿದೆ.

ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ತೀರಾ ಹದಗೆಟ್ಟಿದೆ, ಕ್ಷಣಕ್ಕೊಬ್ಬರಂತೆ ಸೋಂಕಿತರಾಗುತ್ತಿದ್ದಾರೆ. ಇದೆಲ್ಲದರ ನಡುವೆ ವಿಟಿಯು ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ಹೇಳಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ ಅವರೇ,ವಿದ್ಯಾರ್ಥಿಗಳ ಹಿತವನ್ನು ಗಮನಿಸಿ, ಅವರನ್ನು ಅಪಾಯಕ್ಕೆ ದೂಡದೆ ಕೂಡಲೇ ಪರೀಕ್ಷೆ ಮುಂದೂಡಿ ಎಂದು ಆಗ್ರಹಿಸಿದೆ.

ಈ ಸಂಬಂದ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ.
ದಿನೇ ದಿನೇ ಸೋಂಕಿತರ, ಸಾವುಗಳ ಸಂಖ್ಯೆ ಹೆಚ್ಚುತ್ತಿದೆ, ಈ ಸಮಯದಲ್ಲಿ ವಿದ್ಯಾರ್ಥಿಗಳ ಜೀವದ ಜೊತೆ ಆಟವಾಡುವುದು ಸರಿಯಲ್ಲ ಎಂದು ಹೇಳಿದೆ.

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಉಪ ಮುಖ್ಯ ಅವರೇ, ಕೂಡಲೇ ನಾಳೆಯಿಂದ ಶುರುವಾಗುವ ವಿಟಿಯು ಪರೀಕ್ಷೆಗಳನ್ನು ಮುಂದೂಡುವ ಕ್ರಮ ಕೈಗೊಳ್ಳಿ ಎಂದು ಒತ್ತಾಯಿಸಿದೆ.

ಯುವಜನರನ್ನು ಅನಗತ್ಯವಾಗಿ ಅಪಾಯಕ್ಕೆ ತಳ್ಳಬೇಡಿ ವಿಟಿಯು ಪರೀಕ್ಷೆಗಳನ್ನು ಮುಂದೂಡಿ ಎಂದು ಕಾಂಗ್ರೆಸ್ ಪಕ್ಷ ಟ್ವೀಟ್ ನಲ್ಲಿ ಒತ್ತಾಯಿಸಿದೆ.