ವಿದೇಶದತ್ತ ಮೈ ಹೀರೋ

ಕಿರುತೆರೆ ಮತ್ತು ಹಿರಿತೆರೆಯಲ್ಲಿ ಮೋಡಿ ಮಾಡಿರುವ ನಟಿ. ಅಂಕಿತಾ ಅಮರ್. ಅವರ ಹೊಸ ಚಿತ್ರ “ಮೈ ಹೀರೋ”ಗೆ ಮಧ್ಯ ಪ್ರದೇಶದ ಹಲವು ಕಡೆ ಚಿತ್ರೀಕರಣ ಪೂರ್ಣಗೊಂಡಿದ್ದು ಕೊನೆಯ ಹಂತದ ಚಿತ್ರೀಕರಣಕ್ಕೆ ವಿದೇಶದತ್ತ ಮುಖ ಮಾಡಿದೆ.

ಮಧ್ಯಪ್ರದೇಶದ ಮಹೇಶ್ವರ ಎಂಬ ಸ್ಥಳದಲ್ಲೇ ಹೆಚ್ಚಿನ ಚಿತ್ರೀಕರಣವಾಗಿದೆ.ಒಂದು ಹಾಡು ಹಾಗೂ ಮಾತಿನ ಭಾಗದ ಚಿತ್ರೀಕರಣ ನಡೆದಿದೆ.  ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್, ಬಾಲನಟ ವೇದಿಕ್ ಕೌಶಿಕ್, ದತ್ತಣ್ಣ, ಅಂಕಿತ ಅಮರ್ ಹಾಗೂ ಅಲ್ಲಿನ ಸ್ಥಳೀಯ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಕೊನೆಯ ಹಂತದ ಚಿತ್ರೀಕರಣ ಅಮೇರಿಕಾದ ಲ್ಲಿ ನಡೆಯಲಿದೆ.

ಸಾಮಾಜಿಕ ಸಮಸ್ಯೆಯೊಂದರ ಕುರಿತಾದ ಚಿತ್ರವಿದು. ಅವಿನಾಶ್ ವಿಜಯಕುಮಾರ್ ಚಿತ್ರ ನಿರ್ದೇಶಿಸಿ ನಿರ್ಮಿಸಿದ್ದಾರೆ. ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಈ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ದತ್ತಣ್ಣ, ಪ್ರಕಾಶ್ ಬೆಳವಾಡಿ, ನಿರಂಜನ್ ದೇಶಪಾಂಡೆ, ಅಂಕಿತ ಅಮರ್, ತನುಜಾ ಕೃಷ್ಣಪ್ಪ, ನವೀನ್ ಬೊಂದೇಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಗಗನ್ ಬಡೇರಿಯಾ ಸಂಗೀತ ನಿರ್ದೇಶನ ಹಾಗೂ ವೀನಸ್ ನಾಗರಾಜ್ ಅವರ ಛಾಯಾಗ್ರಹಣ “ಮೈ ಹೀರೊ” ಚತ್ರಕ್ಕಿದ್ದು, ಎ.ವಿ.ಸ್ಟುಡಿಯೋಸ್ ಸಂಭಾಷಣೆ ಬರೆದಿದ್ದಾರೆ.