ವಿದ್ಯಾನಿಕೇತನ ಶಾಲೆಯಲ್ಲಿ ಮಕ್ಕಳ ಸಂತೆ

ಕೋಲಾರ,ಜ.೧೮: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ನಳಂದ ವಿದ್ಯಾನಿಕೇತನ ಶಾಲೆಯ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ ಪ್ರಯುಕ್ತ ನಗರದ ಪಾಲಸಂದ್ರ ಬಡಾವಣೆಯಲ್ಲಿರುವ ನಳಂದ ವಿದ್ಯಾನಿಕೇತನ ಶಾಲೆಯಲ್ಲಿ ಮಕ್ಕಳ ಸಂತೆ ಹಾಗೂ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಬಾಲಚಂದ್ರ ಎನ್. ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಳಂದ ವಿದ್ಯಾನಿಕೇತನ ಶಾಲೆಯ ಕಾರ್ಯದರ್ಶಿ ಟಿ.ಆರ್.ಜಯರಾಮ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಸದಸ್ಯ ಕಾರ್ಯದರ್ಶಿ ಸುನೀಲ ಎಸ್ ಹೊಸಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಕನ್ನಯ್ಯ, ನಳಂದ ವಿದ್ಯಾನಿಕೇತನ ಶಾಲೆಯ ಅಧ್ಯಕ್ಷ ಕೆ.ಶ್ರೀನಿವಾಸ, ಪ್ರಾಂಶುಪಾಲ ಎಂ.ರಮೇಶ ಉಪಸ್ಥಿತರಿದ್ದರು. ಶಾಲೆಯ ಸಹ ಶಿಕ್ಷಕಿ ವಿಜಯಲಕ್ಷ್ಮಿ ಸ್ವಾಗತಿಸಿ, ಬಿಂದು ಕೆ. ನಿರೂಪಿಸಿ, ಪ್ರಾಂಶುಪಾಲ ಎಂ.ರಮೇಶ್ ವಂದಿಸಿದರು.