ವಿದ್ಯಾರ್ಥಿಗಳನ್ನು ತಮ್ಮ ಮಕ್ಕಳಂತೆ ನೋಡಿಕೊಳ್ಳಬೇಕು

ರಾಯಚೂರು,ಆ.೧೮-
ಮಾನ್ವಿ ಪಟ್ಟಣದ ಸರ್ಕಾರಿ ಬಾಲಕಿಯರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವಸತಿ ನಿಲಯಕ್ಕೆ ಹಾಗೂ ಪರಿಶಿಷ್ಟ ಪಂಗಡ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್‌ಎಸ್ ಬೋಸರಾಜು ಅವರು ಧಿಡೀರ್ ಭೇಟಿ ನೀಡಿ ವಿದ್ಯಾರ್ಥಿನಿಲಯದ ಆಹಾರದ ಗುಣಮಟ್ಟ ಹಾಗೂ ವಸತಿ ನಿಲಯಗಳ ವಾಸ್ತವತೆಯನ್ನು ಪರಿಶೀಲಿಸಿದರು.
ಮಾನ್ವಿ ಪಟ್ಟಣದ ಪ್ರಗತಿ ಪರಿಶೀಲನಾ ಸಭೆಯ ನಂತರ ಅಧಿಕಾರಿಗಳೋಂದಿಗೆ ವಿವಿಧ ವಸತಿನಿಲಯಗಳಿಗೆ ಭೇಟಿ ನೀಡಿ ವಾರ್ಡ್ ನ್ ಗಳಿಗೆ ವಿದ್ಯಾರ್ಥಿಗಳನ್ನು ಮಕ್ಕಳ ರೂಪದಲ್ಲಿ ಕಾಣಬೇಕು. ವಸತಿ ನಿಲಯದಲ್ಲಿ ಕುಡಿಯುವ ನೀರು, ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಅನುಗುಣವಾಗಿ ಮೂಲಸೌಲಭ್ಯಗಳನ್ನು ನೀಡಬೇಕೆಂದು ವಸತಿನಿಲಯದ ಮೇಲ್ವಿಚಾರಕರಿಗೆ ಸೂಚಿಸಿದರು.
ವಸತಿನಿಲಯವನ್ನು ಸ್ವಚ್ಚತೆಯಿಂದ ಕಾಪಾಡಿ ಸಮರ್ಪಕವಾಗಿ ಕುಡಿಯುವ ನೀರು ಹಾಗೂ ವಿದ್ಯಾರ್ಥಿನಿಯರಿಗೆ ಸರ್ಕಾರದಿಂದ ಬರುವ ಎಲ್ಲಾ ಸೌಲಭ್ಯ ತಲುಪಿಸುವಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.