ವಿದ್ಯಾರ್ಥಿಗಳಲ್ಲಿರಲಿ ಉನ್ನತ ಗುರಿ : ಡಾ. ರೇಷ್ಮಾ ಕೌರ್

ಬೀದರ್: ಏ.18:ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಗುರಿ ಹೊಂದುವ ಮೂಲಕ ಸಮಾಜದಲ್ಲಿ ಉತ್ತಮ ಸಾಧಕರಾಗಿ ಹೊರಹೊಮ್ಮಬೇಕು ಎಂದು ಸಂಸ್ಥೆಯ ಉಪಾಧ್ಯಕ್ಷೆ ಡಾ|| ರೇಷ್ಮಾ ಕೌರ್ ಹೇಳಿದರು.
ಗುರು ನಾನಕ ಕಾಲೇಜಿನಲ್ಲಿ ಪಿಯು ವಿಜ್ಞಾನ ಮತ್ತು ವಾಣಿಜ್ಯ ವತಿಯಿಂದ ಗುರುವಾರ ಆಯೋಜಿಸಿದ್ದ 2023-24 ನೇ ಸಾಲಿನ ಪಿಯುಸಿ ಸಾಧಕ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಜೀವನದಲ್ಲಿ ಸಣ್ಣ ಗುರಿ ಸಾಧನೆಗೆ ತೊಡಕಾಗುತ್ತದೆ. ಕೇವಲ ಮೆಡಿಕಲ್, ಎಂಜಿನಿಯರಿಂಗ್, ಡೆಂಟಲ್ ಕೋರ್ಸ್ ಆಯ್ಕೆಗೆ ಗುರಿ ಸೀಮಿತವಾಗಬಾರದು. ಇದರ ಹೊರತಾಗಿ ವಿಪುಲ ಅವಕಾಶಗಳಿದ್ದು, ಅವುಗಳತ್ತ ಚಿತ್ತ ಹರಿಸಬೇಕು ಎಂದರು. ವಿದ್ಯಾರ್ಥಿಗಳು ಯಾವುದೇ ಒತ್ತಡಕ್ಕೆ ಒಳಗಾಗದೇ ಮುಕ್ತವಾಗಿ ಕೋರ್ಸ್ ಆಯ್ಕೆ ಮಾಡಿಕೊಳ್ಳಬೇಕು. ಇದರಿಂದ ಮುಂದಿನ ಶೈಕ್ಷಣಿಕ ಅಭ್ಯಾಸಕ್ಕೆ ಹೆಚ್ಚು ಅನುಕೂಲವಾಗುತ್ತದೆ. ಕಲಿಕೆ ಜತೆಗೆ ತಾಳ್ಮೆ, ಕಾಯಕ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಶಿಕ್ಷಕರ ನಿರಂತರ ಪರಿಶ್ರಮ ಮತ್ತು ವಿದ್ಯಾರ್ಥಿಗಳ ಕಠಿಣ ಪ್ರಯತ್ನದಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ|| ವಿಕ್ರಮ ಸಿಂಗ್ ತೋಮರ್ ಮಾತನಾಡಿ ಒಟ್ಟು 354 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ, ಇದರಲ್ಲಿ 96 ಅಗ್ರಶ್ರೇಣಿ ಮತ್ತು 245 ಪ್ರಥಮ ದರ್ಜೆಯಲ್ಲಿ ಪಾಸಾಗಿರುವುದು ಗಮನಾರ್ಹ. ಕಾಲೇಜಿನ ಫಲಿತಾಂಶ 99% ಮೂಲಕ ನಮ್ಮ ಸಂಸ್ಥೆಗೆ ಕೀರ್ತಿ ತಂದು ಕೊಟಿದ್ದಾರೆ, ಅದೇ ರೀತಿ ಹಾಸ್ಟಲ್‍ನಲ್ಲಿರುವ ವಿದ್ಯಾರ್ಥಿಗಳು ಕಠಿಣ ವಿದ್ಯಾಭ್ಯಾಸ ಮಾಡಿ ಹೆಚ್ಚಿನ ಅಂಕಗಳಿಸಿ ಪೆÇೀಷಕರ ಮತ್ತು ಕಾಲೇಜಿಗೆ ಹೆಸರು ತಂದಿದ್ದಾರೆ. ಗುರು ನಾನಕ ಶಿಕ್ಷಣ ಸಂಸ್ಥೆಯೂ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ ನೀಡುತ್ತಿದೆÉ ಎಂದು ತಿಳಿಸಿದರು. ವಿದ್ಯಾರ್ಥಿಗಳ ಜೊತೆಗೆ ಪೆÇೀಷಕರಿಗೂ ಕೂಡಾ ಸನ್ಮಾನಿಸಿ ಅಭಿನಂದಿಸಲಾಯಿತು.