ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಹೆಚ್ಚಿಸಬೇಕು – ಪ್ರೊ. ಯರಿಸ್ವಾಮಿ

ರಾಯಚೂರು.ಜು.೨೮- ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆಯ ಮುಖಾಂತರ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ ಹೆಚ್ಚಿಸಬೇಕಾಗಿದೆ ಎಂದು ಯರಿಸ್ವಾಮಿ ಕುಲಸಚಿವರು ಮೌಲ್ಯಮಾಪನ ಇವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅವರು ರಾಯಚೂರು ವಿಶ್ವವಿದ್ಯಾಲಯ ರಾಯಚೂರು ಹಾಗೂ ತಾರಾನಾಥ ಶಿಕ್ಷಣ ಸಂಸ್ಥೆಯ ಬಿ.ಆರ್.ಬಿ. ವಾಣಿಜ್ಯ ಮಹಾವಿದ್ಯಾಲಯ ರಾಯಚೂರು ಇವರ ಸಹಯೋಗದಲ್ಲಿ ಹಮ್ಮಿಕೊಂಡ ಅಚಿತರ ಕಾಲೇಜುಗಳ ಘಟಕ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ನಮಗೆ ಸ್ವಾತಂತ್ರ್ಯ ತಂದುಕೊಡಲು ಜೀವ ತ್ಯಾಗ ಮಾಡಿದ್ದಾರೆ. ಅವರನ್ನು ಸ್ಮರಿಸಿಕೊಳ್ಳುವ್ಯದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ನಂದಾಪೂರ ಶ್ರೀನಿವಾಸ್ ಪ್ರಧಾನ ಕಾರ್ಯದರ್ಶಿಗಳು ಟಿ.ಎಸ್.ಎಸ್. ಅವರು ಇಂಥಾ ಸ್ಪರ್ಧೆಗಳು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಹೇಳಿ ಶುಭ ಕೋರಿದರು. ಕಾರ್ಯಕ್ರಮದಲ್ಲಿ ಬಿ.ಆರ್.ಬಿ. ಮಹಾವಿದ್ಯಾಲಯದ ವ್ಯವಸ್ಥಾಪನ ಮಂಡಳಿಯ ಅಧ್ಯಕ್ಷರಾದ ರಾಮಬೂಬ ಸದಸ್ಯರಾದ ಗಣೆಕಲ್ ವಿರುಪನಗೌಡ ಉಪಸ್ಥಿತರಿದ್ದರು. ಕಾರ್ಯಕ್ರಮವು ಕು.ಐಶ್ವರ್ಯ ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳನ್ನು ಸಂಪತ್ ಅಂಗಡಿ ವಿ ಉಪ-ಪ್ರಾಚಾರ್ಯರು ಅವರು ಸ್ವಾಗತಿಸಿದ್ದರು.
ಜಿ.ಎಸ್.ಬಿರಾದರ ವಿದ್ಯಾರ್ಥಿ ಕಲ್ಯಾಣಾಧಿಕಾರಿಗಳು ಪ್ರಾಸ್ತವಿಕವಾಗಿ ಮಾತನಾಡಿದ್ದರು. ಡಾ.ಶೀಲಾಕುಮಾರಿ ದಾಸ್ ಪ್ರಾಚಾರ್ಯರು ಅಧ್ಯಕ್ಷತೆ ವಹಿಸಿದ್ದರು. ಕು.ಪೂಜಿತ ಕಾರ್ಯಕ್ರಮವನ್ನು ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಇಪ್ಪತ್ತು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.