ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಯಲಿ: ಶರಣು ಸೈದಾಪುರ

ಶಹಾಪುರ :ಆ.30: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮುಖಾಂತರ ಸ್ಪರ್ಧೆಗೆ ನಾವು ಕೂಡ ಸಿದ್ದರಾಗಿದ್ದೇವೆ ಸರಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ಇದು ಅನುಕೂಲವಾಗುತ್ತದೆ ಎಂದು ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಶ್ರೀ ಶರಣಬಸವ ಪೆÇಲೀಸ್ ಬಿರಾದಾರ್ ಅವರು ವಿದ್ಯಾರ್ಥಿಗಳ ಕುರಿತು ಮಾತನಾಡಿದರು.

ಶಹಾಪುರ ನಗರದ ಹೃದಯ ಭಾಗದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಾಲಯದಲ್ಲಿ ಸಗರನಾಡು ಸೇವಾ ಪ್ರತಿಷ್ಠಾನದ ವತಿಯಿಂದ ಜಿಲ್ಲಾ ಮಟ್ಟದ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಅದರಲ್ಲಿ ಭಾಗವಹಿಸಿ ಮಾತನಾಡಿದರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೆಂಭಾವಿ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷರಾದಹ ಶ್ರೀ ಮಡಿವಾಳಪ್ಪ ಪಾಟೀಲ್ ಹೆಗ್ಗನದೊಡ್ಡಿ ಮಾತನಾಡಿ ಜಿಲ್ಲೆಯಲ್ಲಿ ವಿನೂತನವಾಗಿ ಸಗರನಾಡು ಸೇವಾ ಪ್ರತಿಷ್ಠಾನ ಯಾದಗಿರಿ ಜಿಲ್ಲೆಯ ಮಕ್ಕಳಿಗೆ ಸ್ಪೂರ್ತಿ ತುಂಬುವ ಕೆಲಸ ಮಾಡುತ್ತಿದೆ ಇಂತಹ ಕಾರ್ಯಗಳು ಮಾಡುವುದರಿಂದ ನಮ್ಮ ಜಿಲ್ಲೆಯ ಪ್ರತಿಭಾವಂತ ವಿದ್ಯಾರ್ಥಿಗಳು ಸರಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಇದು ಸ್ಪೂರ್ತಿ ತುಂಬುತ್ತದೆ ಅದಕ್ಕಾಗಿ ಇಂತಹ ಪ್ರಶ್ನೆ ಕಾರ್ಯಕ್ರಮಗಳು ತಿಂಗಳಿಗೆ ಒಂದು ಸಲವಾದರೂ ಸಂಘ ಸಂಸ್ಥೆಗಳು ಹಮ್ಮಿಕೊಳ್ಳುವುದು ತುಂಬಾ ಅವಶ್ಯಕವಾಗಿದೆ ಎಂದು ಹೇಳಿದರು ಸಗರನಾಡು ಸೇವಾ ಪ್ರತಿಷ್ಠಾನದ ಅಧ್ಯಕ್ಷರಾದ ಭೀಮನಗೌಡ ಪೆÇಲೀಸ್ ಪಾಟೀಲ್ ಮಾತನಾಡಿ ನಮ್ಮ ಸಂಸ್ಥೆಯ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳ ಕುರಿತಾಗಿ ಇಂತಹ ಹಲವಾರು ಕಾರ್ಯಕ್ರಮಗಳನ್ನು ನಮ್ಮ ಸಂಸ್ಥೆಯಿಂದ ಪ್ರತಿ ವರ್ಷವೂ ಮಾಡುತ್ತಾ ಬರುತ್ತಿದ್ದೇವೆ ಇನ್ನು ಹೆಚ್ಚಿನ ಕಾರ್ಯಕ್ರಮಗಳು ಮಾಡುವ ಉದ್ದೇಶವನ್ನು ನಮ್ಮ ಸಗರನಾಡು ಸೇವಾ ಪ್ರತಿಷ್ಠಾನದ ಉದ್ದೇಶವಾಗಿದೆ ಎಂದು ಹೇಳಿದರು.

ಈ ಒಂದು ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ ತಂಡಗಳು ಯಾದಗಿರಿ ಗುರುಮಿಟ್ಕಲ್ ವಡಿಗೇರಿ ಸುರಪುರ ಹುಣಸಗಿ ಹೀಗೆ ಹಲವಾರು ಗ್ರಾಮೀಣ ಪ್ರದೇಶದಿಂದ ವಿದ್ಯಾರ್ಥಿಗಳು ಆಗಮಿಸಿ ಸ್ಪರ್ಧಾತ್ಮಕ ಕಾರ್ಯದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು ಅದರಲ್ಲಿ 65 ತಂಡಗಳು ಮೊದಲ ಸುತ್ತಿನಲ್ಲಿ ಭಾಗವಹಿಸಿದವು ಎರಡನೇ ಸುತ್ತಿಗೆ ಕೇವಲ ಹತ್ತು ತಂಡಗಳನ್ನು ಆಯ್ಕೆ ಮಾಡಲಾಯಿತು. ಆ 10 ತಂಡಗಳಿಗೂ ನೇರವಾಗಿ ಪ್ರಶ್ನೆಗಳನ್ನು ಕೇಳುವುದರ ಮುಖಾಂತರ ಅದರಲ್ಲಿ ಪ್ರಥಮ ದ್ವಿತೀಯ ತೃತೀಯ ಸ್ಥಾನಗಳನ್ನು ಪಡೆದುಕೊಂಡವು
ಬಹುಮಾನ ಪಡೆದುಕೊಂಡ ದಂಡಗಳಿಗೆ ವಾರ್ಷಿಕೋತ್ಸವದ ಸಂದರ್ಭದಲ್ಲಿ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಶರಣಬಸಪ್ಪಗೌಡ ದರ್ಶನಾಪುರ ಅವರಿಂದ ಬಹುಮಾನ ವಿತರಣೆ ಮಾಡಲಾಗುತ್ತದೆ ಕ್ವಿಜ್ ಕಾರ್ಯಕ್ರಮ ನೇತೃತ್ವವನ್ನು ದೇವು ದರಿಯಾಪುರ್ ವಹಿಸಿದರು ಮತ್ತು ಸಂಸ್ಥೆಯ ಎಲ್ಲಾ ಪದಾಧಿಕಾರಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು