ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ಕೋಲಾರ, ಜೂ,೬-೨೦೨೩-೨೪ನೇ ಸಾಲಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಜೂನ್ ೧೫ ರವರೆಗೆ ಪ್ರಸಕ್ತ ವರ್ಷದಲ್ಲಿ ಶಾಲಾ/ಕಾಲೇಜುಗಳಿಗೆ ದಾಖಲಾಗಿರುವ ಸಂಬಂಧದ ಶುಲ್ಕ ಪಾವತಿ ರಸೀದಿ ಅಥವಾ ೨೦೨೨-೨೩ನೇ ಸಾಲಿನ ವಿದ್ಯಾರ್ಥಿ ಬಸ್‌ಪಾಸ್ ಈ ದಾಖಲೆಗಳನ್ನು ನಿಗಮದ ಬಸ್ಸುಗಳಲ್ಲಿ ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ ಎಂದು ಕ.ರಾ.ರ.ಸಾ.ನಿಗಮ, ಕೋಲಾರ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.