
ಬೀದರ್: ಆ.28:ತಾಲ್ಲೂಕಿನ ಯಾಕತಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಉಚಿತವಾಗಿ ಕೊಡಲಾಗುವ ಶೂ ಹಾಗೂ ಸಾಕ್ಸ್ ವಿತರಿಸಲಾಯಿತು.
ನಾಗೋರಾ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನರಸಪ್ಪ ಜಾನಕನೋರ ಶೂ ಹಾಗೂ ಸಾಕ್ಸ್ ವಿತರಣೆಗೆ ಚಾಲನೆ ನೀಡಿದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಸಂಜುಕುಮಾರ, ಚಂದ್ರಶೇಖರ ಪಾಟೀಲ, ಸುರೇಶ ಪಾಟೀಲ, ಮುಖ್ಯಶಿಕ್ಷಕ ವಿನಾಯಕ ಚವಾಣ್, ಕಮಲಾಕರ್, ನಾಗೇಂದ್ರ, ಕನಕದಾಸ, ನಾಗಯ್ಯ ಸ್ವಾಮಿ ಮತ್ತಿತರರು ಇದ್ದರು.