ವಿದ್ಯಾರ್ಥಿಗಳಿಗೆ ಉದ್ಯೋಗ ಆಯ್ಕೆ ಪ್ರಕ್ರಿಯೆ

ಚಿತ್ರದುರ್ಗ. ಜು.೧೨; ನಗರದ ಎಸ್.ಜೆ.ಎಂ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಮೈಸೂರಿನ ಎಕ್ಸೆಲ್ ಸಾಫ್ಟ್ ಟೆಕ್ನಾಲಜೀಸ್ ಪ್ರೆöÊವೇಟ್ ಲಿಮಿಟೆಡ್‌ನ ವತಿಯಿಂದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಉದ್ಯೋಗ ಆಯ್ಕೆ ಪ್ರಕ್ರಿಯೆ ನಡೆಯಿತು. 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಉದ್ಯೋಗ ಆಯ್ಕೆ ಪ್ರಕ್ರಿಯೆ ಪರೀಕ್ಷೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಎಕ್ಸೆಲ್ ಸಾಫ್ಟ್ ಟೆಕ್ನಾಲಜೀಸ್ ಪ್ರೆöÊವೇಟ್ ಲಿಮಿಟೆಡ್‌ನ ಮಾನವ ಸಂಪನ್ಮೂಲ ಅಧಿಕಾರಿಗಳಾದ ಗೋಕುಲ್ ಮತ್ತು ಗುರುರಾಜ್ ಮಾತನಾಡಿ, ಎಕ್ಸೆಲ್ ಸಾಫ್ಟ್ ಟೆಕ್ನಾಲಜೀಸ್ ಕಂಪನಿಯು ಭಾರತದ ಪ್ರಮುಖ ಎಡುಟೆಕ್ ಸಾಪ್ಟ್ವೇರ್ ಕಂಪನಿಗಳಲ್ಲಿ ಒಂದಾಗಿದ್ದು, ಅತ್ಯಾಧುನಿಕ ಕೌಶಲ್ಯ ತಂತ್ರಜ್ಞಾನದ ಮೇಲೆ ಕಾರ್ಯ ನಿರ್ವಹಿಸುತ್ತಿದೆ. 1000ಕ್ಕೂ ಹೆಚ್ಚು ಸಿಬ್ಬಂದಿಯನ್ನು ಹೊಂದಿರುವ ಈ ಸಂಸ್ಥೆಯು ಅಂತರಾಷ್ಟಿçÃಯ ಮಟ್ಟದಲ್ಲಿ ತನ್ನ ಜಾಲವನ್ನು ಹೊಂದಿದೆ. ಕೈಗಾರಿಕಾ ಮತ್ತು ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಮನ್ವಯತೆ ಮೂಡಿಸುವ ನಿಟ್ಟಿನಲ್ಲಿ ಎಕ್ಸೆಲ್ ಸಾಫ್ಟ್ ಟೆಕ್ನಾಲಜೀಸ್ ಮತ್ತು ಎಸ್.ಜೆ.ಎಂ.ಐ.ಟಿ ಮದ್ಯೆ ತಾಂತ್ರಿಕ ಒಡಂಬಡಿಕೆಯಾಗಿದ್ದು, ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗವಕಾಶ ಕಲ್ಪಿಸುವ ದಿಸೆಯಲ್ಲಿ ಕೆಲಸ ಮಾಡಲಿದೆ ಎಂದು ನುಡಿದರು. ಪ್ರಾಂಶುಪಾಲರಾದ ಡಾ.ಭರತ್ ಪಿ.ಬಿ. ಮಾತನಾಡಿ, ನಮ್ಮ ಕಾಲೇಜಿನಲ್ಲಿ ಕಳೆದ ಸಾಲಿಗಿಂತ ಈ ಬಾರಿ ಹೆಚ್ಚು ವಿದ್ಯಾರ್ಥಿಗಳು ಕ್ಯಾಂಪಸ್ ಆಯ್ಕೆ ಪ್ರಕ್ರಿಯೆಯಲ್ಲಿ ಉದ್ಯೋಗ ಗಳಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪಠ್ಯಕ್ರಮದ ಜೊತೆಗೆ ಉದ್ಯೋಗ ಗಳಿಸಲು ಅನುಕೂಲವಾಗುವ ತಂತ್ರಜ್ಞಾನದ ತರಬೇತಿ, ವ್ಯಕ್ತಿತ್ವ ವಿಕಸನ, ಪ್ರೊಗ್ರಾಮಿಂಗ್ ಕಾರ್ಯಾಗಾರಗಳನ್ನು ಹೆಚ್ಚು ಹೆಚ್ಚು ಆಯೋಜಿಸಲಾಗುತ್ತಿದ್ದು, ಇದರ ಪರಿಣಾಮ ಈ ಬಾರಿ ಹೆಚ್ಚು ವಿದ್ಯಾರ್ಥಿಗಳು ವಿವಿಧ ಕಂಪನಿಗಳಲ್ಲಿ ಉದ್ಯೋಗ ಗಳಿಸಿದ್ದಾರೆ ಎಂದು ತಿಳಿಸಿದರು. ಬೆಂಗಳೂರಿನ ಕೋಚೆಡ್ ಸಂಸ್ಥೆಯ ಸಹಸಂಸ್ಥಾಪಕರಾದ ಶ್ರೀ ಅನಿಕೇತನ್ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರೊಗ್ರಾಮಿಂಗ್ ತಂತ್ರಜ್ಞಾನ ಮತ್ತು ಉದ್ಯೋಗ ನೇಮಕಾತಿಗೆ ಅವಶ್ಯವಿರುವ ತರಬೇತಿಯನ್ನು ನೀಡಲಾಗಿದ್ದು, ಇದರಿಂದಾಗಿ ವಿದ್ಯಾರ್ಥಿಗಳಿಗೆ ಉದ್ಯೋಗ ಆಯ್ಕೆ ಪ್ರಕ್ರಿಯೆಗೆ ಹೆಚ್ಚಿನ ಪ್ರಯೋಜನ ಆಗಿದೆ ಎಂದು ನುಡಿದರು.ಎಸ್.ಜೆ.ಎಂ.ಐ.ಟಿಯ ಉದ್ಯೋಗ ಮತ್ತು ತರಬೇತಿ ಅಧಿಕಾರಿ ಡಾ. ಅರವಿಂದ್ ಟಿ ವಿ ಸಂಪೂರ್ಣ ಕಾರ್ಯಕ್ರಮವನ್ನು ಆಯೋಜಿಸಿದ್ದರು.