ಕಲಬುರಗಿ:ಜೂ.20: ಜಗತ್ತಿನ ಸವಾಲುಗಳನ್ನು ಎದುರಿಸಲು ಕೌಶಲ್ಯಗಳು ಮುಖ್ಯ ಪಾತ್ರ ವಹಿಸುತ್ತವೆ. ಪದವಿ ಪಡೆಯುವುದರ ಜೊತೆಗೆ ಆಧುನಿಕ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವುದು ಉತ್ತಮ ಎಂದು ಖಾಜಾ ಬಂದಾನವಾಜ ಉಪ ಕುಲಪತಿ ಪ್ರೊ. ಅಲಿ ರಜಾ ಮೂಸ್ವಿ ನುಡಿದರು.
ಕೆಬಿಎನ್ ಸಭಾಂಗಣದಲ್ಲಿ ಮಂಗಳವಾರ ಜರುಗಿದ ವಿವಿಯ ಇಂಜಿನಿಯರಿಂಗ ನಿಕಾಯದ “ಡಿಸಫಿಯೋ 2023” ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಎಂಜಿನಿಯರಗಳು ದೇಶದ ಪ್ರಗತಿ ಹಾಗೂ ನಿರ್ಮಾಣದಲ್ಲಿ ಬಹು ಮುಖ್ಯ ಪಾತ್ರ ನಿರ್ವಹಿಸುತ್ತಾರೆ. ಅಧ್ಯಯನದ ಜೊತೆಗೆ ಸಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲೂ ತೊಡಗಿಸಿಕೊಳ್ಳಬೇಕು. ಇದರಿಂದ ಮನೋರಂಜನೆ ಅಷ್ಟೇ ಅಲ್ಲದೇ ಕ್ರೀಡಾ ಮನೋಭಾವ ಬೆಳೆಯುತ್ತದೆ ಎಂದು ಹೇಳಿದರು.
ಎಂಜಿನಿಯರಿಂಗ ನಿಕಾಯದ ಡೀನ್ ಪ್ರೊ. ಮೊಹಮ್ಮದ್ ಆಜಮ್ ಇವರು “ಡಿಸಫಿಯೋ” ಕುರಿತು ಮಾತನಾಡಿದರು. ವಿದ್ಯಾರ್ಥಿಗಳು ಚುರುಕಾಗಿ ಭಾಗವಹಿಸಿ ಯಶಸ್ವಿಯಾಗಿಸಿ ದ್ದಾರೆ ಎಂದು ಎಲ್ಲ ವಿದ್ಯಾರ್ಥಿಗಳಿಗೆ ಅಭಿನಂದನೆ ತಿಳಿಸಿದರು. ಈ ಕಾರ್ಯಕ್ರಮದಲ್ಲಿ ವಿವಿಧ ಕ್ರೀಡಾ ಹಾಗೂ ಸಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ನೀಡಲಾಯಿತು.
ಅಬ್ದುಲ್ ಮಜೀದ್ ಪ್ರಾರ್ಥನೆಯನ್ನು ಪ್ರಸ್ತುತ ಪಡಿಸಿದರು. ಸಾನಿಯಾ ಇರಂಖಾನ್ ಅತಿಥಿಗಳನ್ನು ಸ್ವಾಗತಿಸಿದರು. ಶೀಮಾ ಮೆಹವಾಶ ವಂದಿಸದರೆ ಮಿಸ್ಬಾ ನೂರಿನ ನಿರೂಪಿಸಿದರು.
ಈ ಕಾರ್ಯಕ್ರಮದಲ್ಲಿ ಕೆಬಿಎನ್ ಎಂಜಿನಿಯರ ನಿಕಾಯದ ಎಲ್ಲ ವಿಭಾಗದ ಶಿಕ್ಷಕ ಹಾಗೂ ವಿದ್ಯಾರ್ಥಿಗಳು ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ವಿದ್ಯಾರ್ಥಿಗಳು ಹಾಜರಿದ್ದರು.